spot_img
Tuesday, March 31, 2026
spot_img

ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಮೇಲೆ ಲೈಂಗಿಕ ಕಿರುಕಳ ಆರೋಪ | ಪ್ರಕರಣ ದಾಖಲು

ಜನಪ್ರತಿನಿಧಿ (ಕುಂದಾಪುರ) : ಕುಂದಾಪುರ ಸರ್ಕಾರಿ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್‌ ರೆಬೆಲ್ಲೋ ವಿರುದ್ಧ ಸಹೋದ್ಯೋಗಿ ವೈದ್ಯೆಯೊಬ್ಬರು ಮಾನಸಿಕ ಕಿರುಕಳದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವೈದ್ಯಾಧಿಕಾರಿ ರಾಬರ್ಟ್‌ ವಿರುದ್ಧ ಈ ಹಿಂದೆಯೂ ಹಲವು ಆರೋಪಗಳು ಕೇಳಿ ಬಂದಿತ್ತು. ಸದ್ಯ, ತನ್ನ ಸಹೋದ್ಯೋಗಿ ವೈದ್ಯೆಗೆ ಕಳೆದ ಆರು ತಿಂಗಳಿಂದ ಲೈಂಗಿಕ ವಿಚಾರಗಳ ಬಗ್ಗೆ ಮಾತನಾಡುತ್ತಾ ಮಾನಸಿಕ ಹಿಂಸೆ ನೀಡಿದ್ದಲ್ಲದೇ ಹಾಗೂ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಕರ್ತವ್ಯದ ಆರಂಭದ ದಿನಗಳಿಂದ  ಆಪಾದಿತನು ಕರ್ತವ್ಯದ ಸಮಯ ಮುಗಿದ ಮೇಲೆ ರಾತ್ರಿ 10-11 ಗಂಟೆಯ ನಂತರದಲ್ಲಿ ಅಶ್ಲೀಲ ಮೆಸೇಜ್‌ ಗಳನ್ನು ಕಳುಹಿಸಿ ವೈಯುಕ್ತಿಕ ಬದುಕನ್ನು ಕೆದಕುವ ಪ್ರಯತ್ನ ಮಾಡಿದ್ದಲ್ಲದೇ, ವೀಡಿಯೋ ಕರೆಗಳನ್ನು ಮಾಡಿ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಸಂತ್ರಸ್ತೆ ವೈದ್ಯೆ ಹೇಳಿದ್ದಾರೆ.

ಅಲ್ಲದೇ ರಾತ್ರಿ ಕರ್ತವ್ಯದ ಹೊರತು  ಸಮಯದಲ್ಲಿ ಅತೀ ಅಶ್ಲೀಲವಾಗಿ, ದೈಹಿಕ ರೂಪದ ಬಗ್ಗೆ ವರ್ಣಿಸುವುದು ಅಗೌರವಪೂರಕವಾಗಿ ಸಂಭಾಷಣೆಯ ಮೂಲಕ ತೀವ್ರ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಮಾತ್ರವಲ್ಲದೇ, ಉದ್ಯೋಗವನ್ನು ಉಳಿಸಿಕೊಳ್ಳುವ ಸಲುವಾಗಿ ಹಾಗೂ ಕೌಂಟುಂಬಿಕ ಹಾಗೂ ವೈಯುಕ್ತಿಕ ಮರ್ಯಾದೆಗೆ ಅಂಜಿ ಆರೋಪಿತನಿಗೆ ಗೌರವಪೂರ್ವಕವಾಗಿ ಉತ್ತರಿಸುತ್ತಾ ಆರೋಪಿತನ ಕೋರಿಕಗಳನ್ನು ನಿರಾಕರಿಸುತ್ತಾ ಬಂದರೂ ಆಪಾದಿತ ವೈದ್ಯ  ದೂರುದಾರರು ಆಸ್ಪತ್ರೆಯ ಇತರ ಪುರುಷ ಸಿಬ್ಬಂದಿಯವರೊಂದಿಗೆ ಸ್ವಾಭಾವಿಕವಾಗಿ ಸಂಭಾಷಣೆ ಮಾಡಿರುವುದಕ್ಕೆ ಕಥೆಗಳನ್ನು ಕಟ್ಟಿ ಜೀವಬೆದರಿಕೆಯನ್ನು ಹಾಕಿದ್ದಲ್ಲದೇ, ಉದ್ಯೋಗದಿಂದ ತೆಗೆಯವುದಾಗಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಠಾಣೆಯಲ್ಲಿ ಸಂತ್ರಸ್ತೆ ವೈದ್ಯೆ ದೂರು ನೀಡಿದ್ದು, ಐಪಿಸಿ ಸೆಕ್ಶನ್‌ 354, 354A, 504, 506, 509 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ, ವೈದ್ಯಾಧಿಕಾರಿ ಡಾ. ರಾಬರ್ಟ್‌ ರೆಬೆಲ್ಲೋ ತಲೆಮರೆಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!