spot_img
Saturday, December 7, 2024
spot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು: ಶಾಲಾ ಪ್ರಾರಂಭೋತ್ಸವ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಕುಂದಾಪುರ ವಲಯ ಇಲ್ಲಿ ೨೦೨೪-೨೫ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗುವುದರ ಮೂಲಕ ಶಾಲಾ ಹಳೆವಿಯಾರ್ಥಿ ಸಂಘದ ಅಧ್ಯಕ್ಷರು ಮತ್ತು ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿ ಮೂಡುಬೈಲೂರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು “ಸಮುದಾಯ ಮತ್ತು ಹಳೆವಿದ್ಯಾರ್ಥಿ ಸಂಘದ ಸಹಾಯದಿಂದ ಶಾಲೆಗೆ ಅತೀ ಅಗತ್ಯವಾದ ಮೂಲಭೂತ ಸೌಕರ್ಯಗಳಾದ ಇಂಟರ್ನೇಟ್, ಪ್ರತಿ ತರಗತಿಗೆ ಸ್ಮಾರ್ಟ್ ಟಿ ವಿ., ಕಂಪ್ಯೂಟರ್ ಲ್ಯಾಬ್ ಮುಂತಾದ ಆಧುನಿಕ ಕಲಿಕ ಸೌಕರ್ಯಗಳ ಜೊತೆಗೆ ಪ್ರತಿಭಾವಂತ ಶಿಕ್ಷಕರನ್ನು ಒದಗಿಸಿದ್ದು ಮಕ್ಕಳನ್ನು ಹೆಚ್ಚಿನ ಸಂಖೈಯಲ್ಲಿ ಶಾಲೆಗೆ ದಾಖಲಿಸಿಸುವುದರ ಮೂಲಕ ಪೋಷಕರು ಈ ಮೂಲಭೂತ ಸೌಕರ್ಯಗಳ ಪ್ರಯೋಜನ ಪಡೆಯಬೇಕು” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಆಶಾಲತಾ ಶಿವರಾಮ ಶೆಟ್ಟಿ ಅವರು, ದೂರದಿಂದ ಶಾಲೆಗೆ ಬರುವ ಮಕ್ಕಳಿಗೆ ಸಾರಿಗೆ ವೆಚ್ಚಕ್ಕಾಗಿ ರೂಪಾಯಿ ಹತ್ತು ಸಾವಿರದ ಚೆಕ್ ನ್ನು ಮುಖ್ಯಶಿಕ್ಷಕರಿಗೆ ನೀಡಿದರು. ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಶೋಭಾ ಇವರ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯೆ ಲಕ್ಷ್ಮೀ, ಅಂಗನವಾಡಿ ಕಾರ್ಯಕರ್ತೆ ಆಶಾಲತಾ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಖಜಾಂಚಿ ಸುಧಾಕರ ಬೈಲೂರು ಸರಕಾರಿಂದ ಕೊಡಮಾಡಿದ ಉಚಿತ ನೋಟ್ ಪುಸ್ತಕವನ್ನು ಮಕ್ಕಳಿಗೆ ವಿತರಿಸಿದರು.
ಒಂದನೇ ತರಗತಿಗೆ ದಾಖಲಾದ ಮಕ್ಕಳಿಗೆ ಬಲೂನ್ ನೀಡಿ ಮೆರವಣಿಗೆಯಲ್ಲಿ ಕರೆತರಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಡಿ ಸ್ವಾಗತಿಸಿದರು. ಸಹಶಿಕ್ಷಕ ಆನಂದ ಕುಲಾಲ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಸಂಧ್ಯಾ ಕೆ ವಂದಿಸಿದರು. ಗೌರವ ಶಿಕ್ಷಕಿಯರಾದ ಪ್ರಮೀಳಾ, ವಿಶಲಾಕ್ಷಿ, ವೈಶಾಲಿ ಶೆಟ್ಟಿ ಮತ್ತು ನಯನ ಪಠ್ಯ ಪುಸ್ತಕ ವಿತರಣೆಗೆ ಸಹಕರಿಸಿರು.

 

 

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!