spot_img
Wednesday, April 1, 2026
spot_img

ಬಿ. ಬಿ. ಹೆಗ್ಡೆ ಕಾಲೇಜು – ರಕ್ತದಾನ ಶಿಬಿರ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಮೇ ೩೦ರಂದು ಜರಗಿತು.

ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ರಕ್ತದಾನದ ಮಹತ್ವ ಹಾಗೂ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ರಕ್ತನಿಧಿ ಕೇಂದ್ರದ ಕಾರ್ಯವೈಖರಿಯ ಕುರಿತು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರದ ಕಾರ್ಯದರ್ಶಿ ಸೀತಾರಾಮ್ ಶೆಟ್ಟಿ, ಖಜಾಂಚಿಗಳಾದ ಶಿವರಾಮ್ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿಯಾದ ದೀಪಾ ಪೂಜಾರಿ ವಂದಿಸಿ, ಯುವ ರೆಡ್ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ಬಿಬಿ‌ಎ ವಿದ್ಯಾರ್ಥಿ ಸುಹಾಸ್ ಮಲ್ಯ ಪ್ರಾರ್ಥಿಸಿದರು. ಒಟ್ಟು ೧೩೪ ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!