spot_img
Tuesday, March 31, 2026
spot_img

ಡಾ. ಬಿ.ಬಿ. ಹೆಗ್ಡೆ ಕಾಲೇಜು: ‘ಮೆಗಾ ಜಾಬ್ ಡ್ರೈವ್ 2024’

ಕುಂದಾಪುರ : ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಡಿಪಾರ್ಟ್‌ಮೆಂಟ್ ಆಫ್ ಟ್ರೈನಿಂಗ್ & ಪ್ಲೇಸ್ಮೆಂಟ್ ವಿಭಾಗದ ಆಶ್ರಯದಲ್ಲಿ  ಜೂನ್ 1ರಂದು ಅಂತಿಮ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ “ಮೆಗಾ ಜಾಬ್ ಡ್ರೈವ್ 2024” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇದರ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿಯವರು ವಹಿಸಿಕೊಂಡಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ| ವೀಣಾ ಬಿ. ಕೆ. ಯವರು “ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಕೌಶಲ್ಯದ ಮೂಲಕ ಸಿಕ್ಕಿದ ಅವಕಾಶವನ್ನು ಸದುಪಯೋಗ ಮಾಡಿಕೊಂಡಾಗ ಮಾತ್ರ ಇನ್ನಷ್ಟು ಅವಕಾಶಗಳನ್ನು ಪಡೆಯುವುದರ ಮೂಲಕ ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ” ಎಂದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿಯವರು ಸ್ವಾಗತಿಸಿದರು, ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರು ಮತ್ತು ಕಾರ್ಯಕ್ರಮದ ಸಂಯೋಜಕರಾದ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಾಣಿಜ್ಯ ಪ್ರಾಧ್ಯಾಪಕರಾದ ಸುಹಾಸ್ ಜೆ.ಜಿ. ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ೨೫ ಕಂಪನಿಗಳು ನೋಂದಣಿ ಮಾಡಿಕೊಂಡಿದ್ದು, ಅಂತಿಮ ವರ್ಷದ ಪದವಿಯ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಉದ್ಯೋಗಮೇಳದ ಸದುಪಯೋಗ ಪಡೆದುಕೊಳ್ಳುವುದು ವಿಶೇಷವಾಗಿತ್ತು. ಆಂಗ್ಲ ಭಾಷಾ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸ್ವಾತಿ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ಲೇಸ್ಮೆಂಟ್ ಆಫೀಸರ್ ಹರೀಶ್ ಕಾಂಚನ್ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!