spot_img
Tuesday, March 31, 2026
spot_img

ಸರಕಾರಿ ಪ್ರೌಢಶಾಲೆ ವಡೇರಹೋಬಳಿ ಶಾಲಾ ಪ್ರಾರಂಭೋತ್ಸವ

ಕುಂದಾಪುರ: ಪಿವಿ‌ಎಸ್ ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಢಶಾಲೆ ವಡೇರಹೋಬಳಿ ಕುಂದಾಪುರ ಇಲ್ಲಿ ಮೇ ೩೧ರಂದು ೨೦೨೪-೨೫ ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕೃಷ್ಣಾನಂದ ಶಾನುಭಾಗ್ ಹಾಗೂ ಎಸ್ ಡಿ‌ಎಂಸಿ ನಾಮನಿರ್ದೇಶಿತ ಸದಸ್ಯರಾದ ಅಶ್ವತ್ ಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಪುಷ್ಪ ನೀಡುವ ಮೂಲಕ ಸ್ವಾಗತಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿ ಈ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಬಾಲಚಂದ್ರ ಹೆಬ್ಬಾರ್ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಜ್ಯೋತಿ ನಿರೂಪಿಸಿ, ನಾರಾಯಣ್ ರಾಜು ವಂದಿಸಿದರು. ಪ್ರಾರಂಭೋತ್ಸವದ ಸಲುವಾಗಿ ವಿದ್ಯಾರ್ಥಿಗಳಿಗೆ ಪಾಯಸದ ಸಿಹಿಯೂಟ ನೀಡಿ ಸಂಭ್ರಮಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!