Sunday, September 8, 2024

ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್‌ಪಾಸ್ ವಿತರಣೆ

ಉಡುಪಿ : ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ . https://sevasindhuservices.karnataka.gov.in/buspassservices. ಮೂಲಕ ಉಚಿತವಾಗಿ ಹಾಗೂ ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ರೂ. 30 ಸೇವಾ ಶುಲ್ಕವನ್ನು ಪಾವತಿಸಿ, ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ಬಸ್ಸು ಪಾಸುಗಾಗಿ ಅರ್ಜಿ ಸಲ್ಲಿಸಲು ಡಿಕ್ಲರೇಷನ್ ಫಾರ್ಮ್ ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ನಿಗಮದ ವೆಬ್‌ಸೈಟ್‌ನಲ್ಲಿ https://ksrtc.karnataka.gov.in/student pass ನ್ನು ಡೌನ್‌ಲೋಡ್ ಮಾಡಿಕೊಂಡು, ಡಿಕ್ಲರೇಷನ್ ಫಾರ್ಮ್ ಅನ್ನು ಭರ್ತಿಮಾಡಿ ಶಾಲಾ/ಕಾಲೇಜು ಮುಖೋಪಾಧ್ಯಾಯರ/ಪ್ರಾಂಶುಪಾಲರ ಸಹಿ ಮತ್ತು ಶಾಲಾ/ಕಾಲೇಜು ಮೊಹರಿನೊಂದಿಗೆ ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡಬೇಕು.

ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು/ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.

ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸು ಪಡೆಯಲು ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಪಾಸುಗಳನ್ನು ಪಡೆಯಬಹುದಾಗಿರುತ್ತದೆ.

ಕ.ರಾ.ರ.ಸಾ.ನಿಗಮ ವ್ಯಾಪ್ತಿಯ ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಂಗಳೂರು ಕ.ರಾ.ರ.ಸಾ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!