spot_img
Thursday, December 5, 2024
spot_img

ಭಾರಿ ಮಳೆ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ೫ ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ.

ಆದ್ದರಿಂದ ಜಿಲ್ಲೆಯಲ್ಲಿ ಜೂನ್ 3ರಿಂದ ಜೂನ್ 8ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಹಾಗೂ ಸಿಡಿಲಿನ ಸಮಯದಲ್ಲಿ ಸುರಕ್ಷಿತ ಸ್ಥಳದಲ್ಲಿರಬೇಕು.

ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್‌ ಕಂಬ, ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲದೆ ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪಬೇಕು.

ತುರ್ತು ಸೇವೆಗೆ ಶುಲ್ಕರಹಿತ ಸಂಖ್ಯೆ : 1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!