spot_img
Tuesday, March 31, 2026
spot_img

ಚಿತ್ತೂರು ಸರಕಾರಿ ಪ್ರೌಢಶಾಲೆ: NMMS ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನೆ

ಕುಂದಾಪುರ: NMMS ಪರೀಕ್ಷೆಯಲ್ಲಿ ಬೈಂದೂರು ಶೈಕ್ಷಣಿಕ ವಲಯದ 14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಅದರಲ್ಲಿ ಚಿತ್ತೂರು ಸರಕಾರಿ ಪ್ರೌಢಶಾಲೆಯ ನಾಲ್ಕು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಾಲಾ ಪ್ರಾರಂಭೋತ್ಸವದಲ್ಲಿ NMMS ಉತ್ತೀರ್ಣರಾದ ವಿದ್ಯಾರ್ಥಿಗಳಾದ ಸುಶಾಂತ್ ಗಾಣಿಗ, ಆಶಿಶ್ ಶೆಟ್ಟಿ, ಅಂಕಿತಾ ಪೂಜಾರಿ, ಸುಶಾಂತ್ ಪೂಜಾರಿ ಅವರಿಗೆ ಉಡುಪಿ ಜಿಲ್ಲಾ ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆಯ ವತಿಯಿಂದ ಜಿಲ್ಲಾಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು ಪುಸ್ತಕ ನೀಡಿ ಅಭಿನಂದಿಸಿದರು.

ಚಿತ್ತೂರು ಸರಕಾರಿ ಪ್ರೌಢಶಾಲೆಗೆ ಹಾಗೂ ಬೈಂದೂರು ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಶ್ರಮಿಸಿದ ಎಲ್ಲಾ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ನಾಗರಾಜ್, ದೈಹಿಕ ಶಿಕ್ಷಕರಾದ ರಾಘವೇಂದ್ರ ಶೆಟ್ಟಿ , ತಾರಾ, ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಮತ್ತು ಗುತ್ತಿಗೆದಾರರಾದ ಶಶಿಧರ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!