Sunday, September 8, 2024

ಲೋಕಸಭಾ ಚುನಾವಣೆ : ಕರ್ನಾಟಕದ 29 ಮತ ಎಣಿಕೆ ಕೇಂದ್ರಗಳಲ್ಲಿ 13,000 ಕ್ಕೂ ಹೆಚ್ಚು ಸಿಬ್ಬಂದಿಗಳ ನಿಯೋಜನೆ | ಮತ ಎಣಿಕೆಗೆ ಸರ್ವ ಸನ್ನದ್ಧ : ರಾಜ್ಯ ಚುನಾವಣಾ ಆಯೋಗ

ಜನಪ್ರತಿನಿಧಿ (ಬೆಂಗಳೂರು) : ಲೋಕಸಭಾ ಚುನಾವಣೆ 2024ರ ಫಲಿತಾಂಶ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮತಎಣಿಕೆ ಕಾರ್ಯಕ್ಕೆ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆಗಾಗಿ 29 ಎಣಿಕೆ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 13,000 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಮತಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದಲ್ಲದೆ ವ್ಯಾಪಕವಾದ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆದಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳ ಇತರ 14 ಕ್ಷೇತ್ರಗಳಲ್ಲಿ ಮೇ 7 ರಂದು ಎರಡನೇ ಹಂತದ ಮತದಾನ ನಡೆದಿತ್ತು. ಪ್ರತಿ ಲೋಕಸಭಾ ಕ್ಷೇತ್ರಕ್ಕೆ ತಲಾ ಒಂದು ಮತ ಎಣಿಕೆ ಕೇಂದ್ರವಿದ್ದು, ತುಮಕೂರಿನಲ್ಲಿ ಎರಡು ಕಡೆ ಮತ ಎಣಿಕೆ ನಡೆಯಲಿದ್ದು, ಹೀಗಾಗಿ ಒಟ್ಟು 29 ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಾಳೆ(ಮಂಗಳವಾರ) ನಡೆಯಲಿದೆ.

https://x.com/ceo_karnataka/status/1797616401999667612

ಈ ಬಗ್ಗೆ ರಾಷ್ಟ್ರೀಯ ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು, “ನಾವು ಕರ್ನಾಟಕ 28 ಲೋಕಸಭಾ ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ರಾಜ್ಯದ 29 ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ನಾಳೆ(ಮಂಗಳವಾರ) ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗುತ್ತದೆ. ಎಣಿಕೆ ಮೇಲ್ವಿಚಾರಕರು, ಮತ ಎಣಿಕೆ ಸಹಾಯಕರು ಮತ್ತು ಸೂಕ್ಷ್ಮ ವೀಕ್ಷಕರು ಸೇರಿದಂತೆ ಒಟ್ಟು 13,173 ಎಣಿಕೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವಿಸ್ತೃತ ವ್ಯವಸ್ಥೆ ಮಾಡಲಾಗಿದೆ. ಸಿಬ್ಬಂದಿಗೆ ಅಗತ್ಯವಿರುವ ಎಲ್ಲಾ ತರಬೇತಿ ಕೂಡ ಪೂರ್ಣಗೊಂಡಿದೆ. ಮತ ಎಣಿಕೆಗೆ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಪ್ರತಿ ಎಣಿಕೆ ಕೇಂದ್ರದಲ್ಲಿ ಇವಿಎಂಗಳು ಹಾಗೂ ಅಂಚೆ ಮತಪತ್ರಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ಎಣಿಕೆ ಮಾಡಲಾಗುತ್ತದೆ. ಈ ಪ್ರತಿಯೊಂದು ಎಣಿಕೆ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳೊಂದಿಗೆ ಮಾಧ್ಯಮ ಕೇಂದ್ರಗಳನ್ನು ಸಹ ಸ್ಥಾಪಿಸಲಾಗಿದೆ. ಇಲ್ಲಿ ಕಂಪ್ಯೂಟರ್ ಗಳು, ಜೆರಾಕ್ಸ್, ಫ್ಯಾಕ್ಸ್, ಪ್ರಿಂಟರ್‌ಗಳು ಇರಲಿವೆ. ಇದರಿಂದ ಅವರು ಆಯಾ ಮಾಧ್ಯಮಗಳಿಗೆ ವರದಿ ಮಾಡಬಹುದು ಎಂದು ಹೇಳಿದರು.

https://x.com/ceo_karnataka/status/1797607857216774384

ನಾಳೆ ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್

ಇನ್ನು ಇಂದು(ಸೋಮವಾರ) ಮಧ್ಯರಾತ್ರಿಯಿಂದ ಅಂದರೆ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಮತ್ತು ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ 6 ರಿಂದ ಮಂಗಳವಾರ ಮಧ್ಯರಾತ್ರಿಯವರೆಗೆ ಸೆಕ್ಷನ್ 144 ಸೆಕ್ಶನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಮತ್ತು ನಗರ ಸಶಸ್ತ್ರ ಮೀಸಲು ತುಕಡಿಗಳನ್ನು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!