spot_img
Saturday, December 7, 2024
spot_img

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ : 45 ಕೋಟಿ ರೂ. ಜಪ್ತಿ ಮಾಡಿದ ಎಸ್ಐಟಿ !

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್​ಐಟಿ, ಹೈದರಾಬಾದ್​ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ ಮಾಡಿದೆ ಎಂದು ಸದ್ಯ ಮಾಹಿತಿ ತಿಳಿದು ಬಂದಿದೆ.

ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಬಂಧಿತ ಆರೋಪಿ ಸತ್ಯನಾರಾಯಣ್‌ ಒಡೆತನದ ಸಹಕಾರಿ ಬ್ಯಾಂಕ್ ಇದಾಗಿದ್ದು, ಈ ಬ್ಯಾಂಕ್‌ ಖಾತೆಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್​ನ 18 ನಕಲಿ ಖಾತೆಗಳಿಗೆ 94.73 ಕೋಟಿ ರೂ. ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ.

ವರ್ಗಾವಣೆಯಾಗಿದ್ದ 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿದ್ದು, ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎನ್ನುವುದರ ಬೆನ್ನ ಹಿಂದೆ ಬಿದ್ದ ಎಸ್​ಐಟಿ ತನಿಖೆ ಚುರುಕುಗೊಳಿಸಿದೆ ಎಂದು ಮಾಹಿತಿ ಒದಗಿದೆ.

ಸದ್ಯ,ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಎಸ್​ಐಟಿ ಬಂಧಿಸಿದ್ದು, ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಪದ್ಮನಾಭ, ಸತ್ಯನಾರಾಯಣ ಬಂಧಿತ ಆರೋಪಿಗಳು. ಎಸ್ ಐಟಿ ಈ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಈ ನಡುವೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ನಿನ್ನೆ(ಬುಧವಾರ) ಮಾಹಿತಿ ನೀಡಿದ್ದಾರೆ.

ಮುಂಬೈನಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ಕಛೇರಿ ಕಳೆದ ವಾರ ತನ್ನ ಎಂಜಿ ರೋಡ್ ಶಾಖೆಯನ್ನು ಒಳಗೊಂಡ ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ದೂರು ಸಲ್ಲಿಸಿತ್ತು. ಈ ದೂರಿನ ಆಧಾರದ ಮೇಲೆ ಸಿಬಿಐ ಪ್ರಕರಣದ ತನಿಖೆಗೆಯನ್ನು ಕೈಗೆತ್ತಿಕೊಂಡಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!