Saturday, September 14, 2024

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ : ಸ್ವ- ಇಚ್ಛೆಯಿಂದ ರಾಜೀನಾಮೆ : ಸಚಿವ ಬಿ.ನಾಗೇಂದ್ರ

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ರೂ. 94.73 ಕೋಟಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾದ ಆರೋಪಕ್ಕೆ ಗುರಿಯಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ.

ವಿಧಾನ ಸೌಧದಲ್ಲಿ ಸಂಜೆ ಸುದ್ದಿಗೋಷ್ಠಿ ನಡೆಸಿದ ಅವರು, ಸ್ವ- ಇಚ್ಛೆಯಿಂದ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದರು.

ಸಂಜೆ 7.30ಕ್ಕೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ರಾಜೀನಾಮೆ ನೀಡುತ್ತೇನೆ. ನನ್ನ ರಾಜೀನಾಮೆಗೆ ಯಾರ ಒತ್ತಡವೂ ಇಲ್ಲ. ಪಕ್ಷಕ್ಕೆ, ನಾಯಕರಿಗೆ ಮುಜುಗರ ಆಗಬಾರದು ಎಂದು ರಾಜೀನಾಮೆ ನೀಡುತ್ತಿದ್ದೇನೆ. ಮುಖ್ಯಮಂತ್ರಿಯಾಗಲಿ, ಉಪಮುಖ್ಯಮಂತ್ರಿಯಾಗಲಿ ರಾಜೀನಾಮೆಗೆ ಸೂಚಿಸಿಲ್ಲ’ ಎಂದು ಹೇಳಿದರು.

ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ನಡೆಯುತ್ತಿದೆ. ಹೀಗಾಗಿ ನಾನು ಸಚಿವ ಸ್ಥಾನದಲ್ಲಿ ಮುಂದುವರಿಯುವುದು ಸರಿಯಲ್ಲ ಎಂದು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದರು.

ನಿಗಮದ ₹94.73 ಕೋಟಿ ಮೊತ್ತವನ್ನು ಯೂನಿಯನ್ ಬ್ಯಾಂಕ್‌ನ ವಸಂತನಗರ ಶಾಖೆಯಿಂದ ಎಂ.ಜಿ. ರಸ್ತೆಯ ಶಾಖೆಗೆ ವರ್ಗಾಯಿಸಲಾಗಿತ್ತು. ಅಲ್ಲಿಂದ, ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಸೊಸೈಟಿಯ 18 ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು. ಸೊಸೈಟಿಯ ಖಾತೆಗಳಿಂದ ಹೈದರಾಬಾದ್‌ನ ರತ್ನಾಕರ ಬ್ಯಾಂಕ್ ಲಿಮಿಟೆಡ್‌ಗೆ (ಆರ್‌ಬಿಎಲ್‌) ವರ್ಗಾಯಿಸಿ, ಅಲ್ಲಿಂದ ಹಣವನ್ನು ಡ್ರಾ ಮಾಡಿಕೊಳ್ಳಲಾಗಿತ್ತು ಎಂಬ ಆರೋಪ ಇದೆ. ಈ ಅಕ್ರಮದ ತನಿಖೆಗೆ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ರಚಿಸಿದ್ದ ಎಸ್‌ಐಟಿಯು ನಿಗಮದ ಅಧಿಕಾರಿಗಳನ್ನು ಹಾಗೂ ಸಚಿವ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಅವರನ್ನು ಈಗಾಗಲೇ ಬಂಧಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!