spot_img
Wednesday, April 1, 2026
spot_img

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ

ಕುಂದಾಪುರ: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಬಹುಮಾನ ವಿತರಣಾ ಸಮಾರಂಭ ಜೂನ್ 5ರಂದು ನಡೆಯಿತು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭುಗಳು ಕಾರ್ಯಕ್ರಮದ ಕುರಿತು ಹಿತ ನುಡಿಗಳನ್ನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ರೇಖಾ ವಿ ಬನ್ನಾಡಿಯವರು ಸಾಧಕ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿವೃಂದವನ್ನು ಕುರಿತು ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು. ಹಾಗೂ ರಾಜೇಂದ್ರ ತೋಳಾರ್ ಇವರು ಸಾಧಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ನೀಡಿದರು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಪ್ರೊ. ಸತ್ಯನಾರಾಯಣ ಹತ್ವಾರ್, ಐಕ್ಯೂ‌ಎಸಿ ಸಂಯೋಜಕರಾದ ಡಾ. ವಿಜಯ್ ಕುಮಾರ್ ಕೆ. ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

೨೦೨೨-೨೩ ನೇ ಸಾಲಿನ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಾಗೂ ವಿಶ್ವವಿದ್ಯಾಲಯ ಮಟ್ಟದಲ್ಲಿ ನಡೆದ ಕ್ರೀಡೆ, ಕರಾಟೆ ಇನ್ನಿತರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಮತ್ತು ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ.ಗೊಂಡ ವಂದಿಸಿದರು ತೃತೀಯ ಬಿ‌ಎ ವಿದ್ಯಾರ್ಥಿನಿ ಮಿಥುನಾ ಪ್ರಭು ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!