Sunday, September 8, 2024

ಮಾನನಷ್ಟ ಮೊಕದ್ದಮೆ : ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

ಜನಪ್ರತಿನಿಧಿ (ಬೆಂಗಳೂರು) : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪಕ್ಕೆ ಮಾಧ್ಯಮಗಳಲ್ಲಿ ಪ್ರಕರಣೆ ಹೊರಡಿಸಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ದೊರಕಿದೆ.

ಬಿಜೆಪಿಯ ಕೇಶವ ಪ್ರಸಾದ್‌ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ್ದ ಬೆಂಗಳೂರಿನ 42 ನೇ ಎಸಿಎಂಎಂ ಪ್ರಕರಣದಲ್ಲಿ ಖುದ್ದು ಹಾಜರಾಗಲುಬ ಸಮನ್ಸ್ ನೀಡಿತ್ತು. ಹೀಗಾಗಿ ರಾಹುಲ್ ಗಾಂಧಿ ಇಂದು(ಶುಕ್ರವಾರ) ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಈ ಸಂದರ್ಭದಲ್ಲಿ ಸಂಸದ ರಾಹುಲ್ ಪರ ವಕೀಲರ ಜಾಮೀನು ನೀಡುವಂತೆ ಮನವಿ ಮಾಡಿದರು. ರಾಹುಲ್‌ ಪರ ವಕೀಲರ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಧೀಶರು ರಾಹುಲ್ ಗಾಂಧಿಗೆ ಜಾಮೀನು ನೀಡಿ ಆದೇಶಿಸಿದ್ದಾರೆ.

ನ್ಯಾಯಾಲಯ ಈ ಹಿಂದೆ ವಿಚಾರಣೆಗೆ ಎರಡು ಬಾರಿ ವಿನಾಯಿತಿ ನೀಡಲಾಗಿದ್ದು, ಮೂರನೇ ಬಾರಿ ಖುದ್ದು ಹಾಜರಾಗಲು ಸೂಚನೆ ನೀಡಿತ್ತು. ಹೀಗಾಗಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿವಕುಮಾರ್ ರಾಹುಲ್ ಗಾಂಧಿ ಗೆ ಸಾಥ್ ನೀಡಿದರು. ರಾಹುಲ್ ಗಾಂಧಿಗೆ ಮಾಜಿ ಸಂಸದ ಶೂರಿಟಿ ನೀಡಿದ್ದು ವಿಶೇಷವಾಗಿತ್ತು. ಶೂರಿಟಿ ಪುರಸ್ಕಿಸಿದ ನ್ಯಾಯಾಲಯ ಜಾಮೀನು ನೀಡಿ ಜುಲೈ 30 ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!