spot_img
Wednesday, April 1, 2026
spot_img

ಕುಂದಾಪುರ ಬಿ. ಬಿ. ಹೆಗ್ಡೆ ಕಾಲೇಜು: ಗೇಮ್ಸ್ ಫೆಸ್ಟ್ ಆಚರಣೆ

ಕುಂದಾಪುರ: ಪ್ರತಿಯೊಬ್ಬ ಸಾಧಕನ ಪ್ರಯತ್ನದ ಹಿಂದೆ ಕ್ರಿಯಾಶೀಲತೆ ಹಾಗೂ ಪ್ರಯತ್ನಗಳು ಇರುತ್ತದೆ. ಇದಕ್ಕೆ ಕ್ರೀಡೆಯೂ ಹೊರತಾಗಿಲ್ಲ. ಶಾರೀರಿಕ ಹಾಗೂ ಮಾನಸಿಕ ಸಮತೋಲನ ಕಾಪಾಡುವ ಕ್ರೀಡೆ ಬದುಕಿನಲ್ಲಿ ಜೀವನೋತ್ಸಾಹ ತುಂಬುತ್ತದೆ ಎಂದು ಬ್ರಹ್ಮಾವರದ ಎಸ್.ಎಮ್.ಎಸ್. ಪದವಿ ಪೂರ್ವ ಕಾಲೇಜಿನ ಸಮಾಜಶಾಸ್ತ್ರ ಪ್ರಾಧ್ಯಾಪಕ ಮತ್ತು ಪ್ರಸಿದ್ಧ ಕ್ರಿಕೆಟ್ ತರಬೇತುದಾರ ವಿಜಯ್ ಆಳ್ವ ಹೇಳಿದರು.

ಇವರು ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ನಡೆದ ವಾರ್ಷಿಕ ಗೇಮ್ಸ್ ಫೆಸ್ಟ್ನಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕ್ರೋಢ ಬೈಲೂರಿನ ಶ್ರೀ ಶಂಕರನಾರಾಯಣ ಕ್ಯಾಶ್ಯೂ ಇಂಡಸ್ಟ್ರೀಸ್‌ನ ಆಡಳಿತ ನಿರ್ದೇಶಕ ಎಚ್. ಶಶಿಧರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಂಜಿತ್ ಟಿ. ಎನ್. ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಾಣಿಜ್ಯ ಪ್ರಾಧ್ಯಾಪಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕನ್ನಡ ಪ್ರಾಧ್ಯಾಪಕಿ ಶ್ರೀಮತಿ ರೇಷ್ಮಾ ಶೆಟ್ಟಿ ವಂದಿಸಿ, ನಿರೂಪಿಸಿದರು. ವಿದ್ಯಾರ್ಥಿ ಶ್ರೇಯಾ ಪ್ರಾರ್ಥಿಸಿದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!