Sunday, September 8, 2024

ಭಂಡಾರ್ಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಕೋಕ್ಲಬ್ ಉದ್ಘಾಟನೆ

ಕುಂದಾಪುರ: ಜೂನ್ 10ರಂದು ಭಂಡಾರ್ಕಾರ್‍ಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಕೋಕ್ಲಬ್ ಉದ್ಘಾಟನೆ ಮತ್ತು ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಸರಕಾರಿ ಜ್ಯೂನಿಯರ್ ಕಾಲೇಜಿನ ಉಪಪ್ರಾಂಶುಪಾಲರಾದ ಕಿರಣ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪರಿಸರ ದಿನಾಚರಣೆ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೇ ವಿದ್ಯಾರ್ಥಿಗಳೆಲ್ಲರೂ ಜೀವನ ಪರ್ಯಂತ ಪರಿಸರ ಸಂರಕ್ಷಣೆಯ ಬಗೆಗೆ ಒಲವನ್ನು ತೋರಿಸಬೇಕು. ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಪರಿಸರದಿಂದ ಕೂಡಿದ ಸಮಾಜವನ್ನು ನಿರ್ಮಾಣ ಮಾಡಬೇಕು. ನೀರಿನ ದುರ್ಬಳಕೆಯನ್ನು ತಡೆಯಬೇಕು.ಹಾಗಿದ್ದರೆ ಮಾತ್ರ ಸಧೃಡ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ>ಶುಭಕರಾಚಾರಿ ಮಾತನಾಡಿ ನಮ್ಮ ಸುತ್ತಲಿನ ಸಸ್ಯಶ್ಯಾಮಲೇಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಾಗಿದ್ದರೆ ಮಾತ್ರ ನಾವು ಶುದ್ಧವಾದ ಗಾಳಿಯನ್ನು ಉಸಿರಾಡಬಹುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ವಹಿಸಿದ್ದರು.

ಜೀವಶಾಸ್ತ್ರ ಉಪನ್ಯಾಸಕಿ ಡಾ.ಸರೋಜ ಎಮ್ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಶಾಲಿನಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!