spot_img
Wednesday, April 1, 2026
spot_img

ಅಮಾಸೆಬೈಲು: ನವೀಕೃತ ಸುವರ್ಣ ಸೌಧ ಉದ್ಘಾಟನೆ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪುರ: ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಸುವರ್ಣಸೌಧ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜರಗಿತು. ಆಮಾಸೆಬೈಲು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡ್ಗಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸದಾನಂದ ಶೆಟ್ಟಿ ಮಾತನಾಡಿ ಜೂನ್ 14ರಂದು ನಡೆಯುವ ನವೀಕೃತ ಸುವರ್ಣ ಸೌಧ ಉದ್ಘಾಟನೆಯಲ್ಲಿ ಸಂಘದ ಸದಸ್ಯರು, ಗ್ರಾಹಕರು, ಸಹಕಾರಿಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶೇಖರ ನಾಯ್ಕ, ನಿರ್ದೇಶಕರಾದ ನಾರಾಯಣ ರಾವ್, ಕೆ.ಮಂಜಯ್ಯ ಶೆಟ್ಟಿ, ನರಸಿಂಹ ಶೆಟ್ಟಿ, ಸತೀಶ್ ಹೆಗ್ಡೆ, ಗೋಪಾಲ ಪೂಜಾರಿ, ತಿಮ್ಮಪ್ಪ ಪೂಜಾರಿ, ದಿನೇಶ್ ಶೆಟ್ಟಿಗಾರ, ಶ್ರೀಮತಿ ಸುಜಯಾ ಹೆಗ್ಡೆ, ಶ್ರೀಮತಿ ರಾಧಿಕಾ, ಅಕ್ಷತ್ ಕುಮಾರ್, ಬಿ.ಪ್ರವೀಣ್ ಕುಮಾರ್, ಬಿ.ಪ್ರವೀಣ್ ಕುಮಾರ್, ರಘುಪತಿ ರಾವ್, ನಾಗರಾಜ ಪೂಜಾರಿ, ವಲಯ ಮೇಲ್ವಿಚಾರಕ ಎ.ಉದಯ ಶೆಟ್ಟಿ ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಕೃಷ್ಣ ಕುಮಾರ್ ಭಾಗವತ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!