spot_img
Saturday, December 7, 2024
spot_img

ಪಟ್ಟಣಗೆರೆಯ ಶೆಡ್ ಗೆ ನಟ ದರ್ಶನ್ ತೂಗುದೀಪ, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು !

ಜನಪ್ರತಿನಿಧಿ (ಬೆಂಗಳೂರು) : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸ್ಯಾಂಡಲ್‌ವುಡ್‌ ನಟ ದರ್ಶನ್ ತೂಗುದೀಪ, ಪವಿತ್ರಾಗೌಡ ಸೇರಿದಂತೆ ಎಲ್ಲಾ 13 ಆರೋಪಿಗಳನ್ನು ಪಟ್ಟಣಗೆರೆಯ ಶೆಡ್ ಗೆ ಕರೆದೊಯ್ದಿರುವ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

ಚಿತ್ರದುರ್ಗದಿಂದ ಅಪಹರಿಸಿಕೊಂಡು ಬಂದಿದ್ದ ರೇಣುಕಾಸ್ವಾಮಿಯನ್ನು ಇದೇ ಶೆಡ್ ಗೆ ಕರೆದೊಯ್ದು ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ಅಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಎಫ್ಎಸ್ಎಲ್ ತಂಡ ಮತ್ತು ಪೊಲೀಸರು ಸ್ಥಳ ಮಹಜರು ಮಾಡಿಸಿದ್ದಾರೆಂದು ತಿಳಿದು ಬಂದಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ, ನಿಖಿಲ್, ವಿನಯ್, ಕಾರ್ತಿಕ್ ಹಾಗೂ ರಾಘವೇಂದ್ರ ಸೇರಿದಂತೆ 13 ಆರೋಪಿಗಳನ್ನು ಮಂಗಳವಾರ ಬಂಧಿಸಲಾಗಿದ್ದು, ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆರೋಪಿಗಳನ್ನು 6 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣಗೆರೆಯ ಶೆಡ್ ನಲ್ಲಿ ಹತ್ಯೆ ಮಾಡಿದ ಬಳಿಕ ಆರೋಪಿಗಳ ಪೈಕಿ ನಾಲ್ವರು ಶವವನ್ನು ಸುಮನಹಳ್ಳಿಯ ಬಳಿ ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪಟ್ಟಣಗೆರೆ ಶೆಡ್ ಸ್ಥಳ ಮಹಜರಿಗೂ ಮುನ್ನ ಆರೋಪಿಗಳನ್ನು ಶವ ಎಸೆದ ಜಾಗದಲ್ಲಿ ಸ್ಥಳ ಮಹಜರು ನಡೆಸಿದ್ದರು.

ಚಿತ್ರದುರ್ಗದ ಜಿಲ್ಲಾ ಕೇಂದ್ರ ಪಟ್ಟಣದ ನಿವಾಸಿ ರೇಣುಕಾಸ್ವಾಮಿ ಅವರು ದರ್ಶನ್ ಅವರ ಆಪ್ತ ಸ್ನೇಹಿತೆ ಪವಿತ್ರಾ ಗೌಡಗೆ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ದರ್ಶನ್ ಮತ್ತು ವಿಜಯಲಕ್ಷ್ಮೀ ದಾಂಪತ್ಯದಲ್ಲಿ ಬಿರುಕು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಪೊಲೀಸ್ ಮೂಲಗಳ ಪ್ರಕಾರ, ಅವರು ‘ಅಸಭ್ಯ ಭಾಷೆ’ ಬಳಸಿದ್ದಾರೆ ಹಾಗೂ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!