spot_img
Thursday, April 2, 2026
spot_img

ಜೂ.15: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ, ನಾವುಂದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡ ಉದ್ಘಾಟನೆ

ಬೈಂದೂರು ತಾಲೂಕು ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ, ನಾವುಂದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡ ಉದ್ಘಾಟನೆ ಜೂನ್ 15 ಶನಿವಾರ ಬೆಳಿಗ್ಗೆ 10-30ಕ್ಕೆ ನಡೆಯಲಿದೆ.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿ,ಬೆಂಗಳೂರು ಇದರ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ.ಮಹೇಶ್ ಹೆಗ್ಡೆ,ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ., ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ನಿ., ಕುಂದಾಪುರ ಇದರ ಅಧ್ಯಕ್ಷರಾದ ಎಚ್.ಹರಿಪ್ರಸಾದ್ ಶೆಟ್ಟಿ, ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ತಿಳಿಸಿದ್ದಾರೆ.

ಯಕ್ಷಗಾನ ‘ನಾಗಶ್ರೀ’
ಮಧ್ಯಾಹ್ನ 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ರಿ., ಉಡುಪಿ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ದಿ.ಕಾಳಿಂಗ ನಾವುಡ ವಿರಚಿತ ಯಕ್ಷಗಾನ ಪ್ರಸಂಗ ನಾಗಶ್ರೀ ಪ್ರದರ್ಶನಗೊಳ್ಳಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!