Saturday, October 12, 2024

ಜೂ.14: ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಸುವರ್ಣ ಸೌಧ ಕಟ್ಟಡ ಉದ್ಘಾಟನೆ

ಅಮಾಸೆಬೈಲು: ಕುಂದಾಪುರ ತಾಲೂಕು ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಸುವರ್ಣ ಸೌಧ ಕಟ್ಟಡ ಉದ್ಘಾಟನೆ ಜೂನ್ 14 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸಂಘದ ಕಛೇರಿಯ ಎದುರಿನ ಆವರಣದಲ್ಲಿ ಜರುಗಲಿದೆ.

ನವೀಕೃತ ಕಟ್ಟಡವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿ,ಬೆಂಗಳೂರು ಇದರ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.

ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸದಾನಂದ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಆಡಳಿತ ಸಭಾ ಕೊಠಡಿಯನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಪಡಿತರ ವಿಭಾಗವನ್ನು ರಾಜ್ಯ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಉದ್ಘಾಟಿಸಲಿದ್ದಾರೆ. ನವೀಕೃತ ಸಭಾಭವನವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣಕುಮಾರ ಕೊಡ್ಗಿ ಉದ್ಘಾಟಿಸಲಿದ್ದಾರೆ. ನವೋದಯ ಕೊಠಡಿಯನ್ನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸುವರು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಂ.ಮಹೇಶ್ ಹೆಗ್ಡೆ, ಎಸ್.ರಾಜು ಪೂಜಾರಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ., ಅಮಾಸೆಬೈಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕುಲಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶೇಖರ ನಾಯ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಕೃಷ್ಣ ಕುಮಾರ್ ಭಾಗವತ, ನಿರ್ದೇಶಕರಾದ ನಾರಾಯಣ ರಾವ್, ಕೆ.ಮಂಜಯ್ಯ ಶೆಟ್ಟಿ, ನರಸಿಂಹ ಶೆಟ್ಟಿ, ಸತೀಶ್ ಹೆಗ್ಡೆ, ಗೋಪಾಲ ಪೂಜಾರಿ, ತಿಮ್ಮಪ್ಪ ಪೂಜಾರಿ, ದಿನೇಶ್ ಶೆಟ್ಟಿಗಾರ, ಶ್ರೀಮತಿ ಸುಜಯಾ ಹೆಗ್ಡೆ, ಶ್ರೀಮತಿ ರಾಧಿಕಾ, ಅಕ್ಷತ್ ಕುಮಾರ್, ಬಿ.ಪ್ರವೀಣ್ ಕುಮಾರ್, ಬಿ.ಪ್ರವೀಣ್ ಕುಮಾರ್, ರಘುಪತಿ ರಾವ್, ನಾಗರಾಜ ಪೂಜಾರಿ, ವಲಯ ಮೇಲ್ವಿಚಾರಕ ಎ.ಉದಯ ಶೆಟ್ಟಿ ಉಪಸ್ಥಿತರಿರುವರು ಎಂದು ಸಂಘದ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!