spot_img
Wednesday, April 1, 2026
spot_img

ಕುಂದಾಪುರ, ಬೈಂದೂರು ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಸಚಿವರಿಗೆ ಮಂಜುನಾಥ ಭಂಡಾರಿ ಮನವಿ

ಜನಪ್ರತಿನಿಧಿ (ಕುಂದಾಪುರ/ಬೆಂಗಳೂರು) : ವಾರದ ಹಿಂದೆ ಕುಂದಾಪುರ, ಬೈಂದೂರು ಭಾಗದ ವಿದ್ಯಾರ್ಥಿ ಸಂಘಟನೆಗಳು ಗ್ರಾಮೀಣ ಪ್ರದೇಶಗಳಲ್ಲಿ ಬಸ್ಸಿನ ಸಮರ್ಪಕ ವ್ಯವಸ್ಥೆ ಇಲ್ಲದ ಕಾರಣ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಮಾನ್ಯ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ವಿಧಾನ ಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ ಪತ್ರ ಬರೆದು ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ಭಾಗದ ಹಲವು ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ಸಿನ ವ್ಯವಸ್ತೆ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಕುಂದಾಪುರ ಹಾಗೂ ಬೈಂದೂರು ತಾಲೂಕುಗಳ ಹಲವು ಗ್ರಾಮೀಣ ಪ್ರದೇಶಗಳಿಗೆ ಬಸ್ಸು ಸಾರಿಗೆ ವ್ಯವಸ್ಥೆ ಸಮಸ್ಯೆಯಿಂದಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿರುವುದನ್ನು ಈ ಪ್ರದೇಶದ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಗಮನಕ್ಕೆ ತಂದಿರುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಲ್ಲದೇ, ಶೀಘ್ರ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ವಿನಂತಿಸಿಕೊಂಡಿದ್ದಾರೆ.

ಬಸ್ಸುಗಳ ಓಡಾಟಕ್ಕೆ ಪರವಾನಿಗೆಯಿದ್ದರೂ ಕೊಲ್ಲೂರು, ಸಿದ್ದಾಪುರ, ಅಮಾಸೆಬೈಲು, ಹೊಸಂಗಡಿ ಸೇರಿದಂತೆ ಉಭಯ ತಾಲೂಕುಗಳ ಅತೀ ಹಿಂದುಳಿದ ಪ್ರದೇಶಗಳಿಗೆ ಬಸ್ಸು ಸಾರಿಗೆ ವ್ಯವಸ್ಥೆಯನ್ನು ನಿಲ್ಲಿಸಲಾಗಿದೆ. ಇದರಿಂದ ಬಹುಮುಖ್ಯವಾಗಿ ಮಹಿಳೆಯರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು ಸಮಸ್ಯೆ ಪರಿಹರಿಸಿಕೊಡುವಂತೆ ವಿನಂತಿಸಿಕೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ಸದ್ರಿ ಭಾಗದ ಸಾರ್ವಜಿನಿಕರಿಗೆ ಅನುಕೂಲವಾಗುವಂತೆ ಬಸ್ಸು ಸಾರಿಗೆ ವ್ಯವಸ್ಥೆಯನ್ನು ಸರಿಪಡಿಲು ಸಂಬಂದಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಅವರು ಪತ್ರದ ಮುಖೇನ ಮನವಿ ಮಾಡಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!