Wednesday, September 11, 2024

ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಸಿ.ಎ., ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಗಾರ

ಹೆಮ್ಮಾಡಿ; ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ೨೦೨೪-೨೫ ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ., ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು,ಪ್ರಾಂಶುಪಾಲರಾಗಿರುವ  ಗಣೇಶ ಮೊಗವೀರರವರು ಮಾತನಾಡಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಕುರಿತು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು,ಸಂಪನ್ಮೂಲ ವ್ಯಕ್ತಿಗಳಾದ ಸಿ.ಎ. ಗೋಪಾಲಕೃಷ್ಣ ಭಟ್ ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಲಿಯುವ ಆಸಕ್ತಿ ಇರಬೇಕು,ಜ್ಞಾನದ ಹಸಿವು ಇದ್ದಾಗ ಮಾತ್ರ ಜೀವನದಲ್ಲಿ ಸಾಧಿಸಲು ಸಾಧ್ಯ ಹಾಗೂ ಶಿಕ್ಷಣದ ಜೊತೆಗೆ ಆತ್ಮಗೌರವವನ್ನು ಬೆಳೆಸಿಕೊಳ್ಳವುದು ಮುಖ್ಯ ಎನ್ನುತ್ತಾ ಸಿ.ಎ., ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಸಮಗ್ರವಾಗಿ ಮಾಹಿತಿ ನೀಡಿದರು.ಸಮಾರಂಭದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರು
ಉಪಸ್ಥಿತರಿದ್ದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿಯವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ,ಉಪನ್ಯಾಸಕಿ ಶ್ರೀಮತಿ ರಂಜಿತಾ ಹೆಗ್ಡೆ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!