spot_img
Wednesday, April 1, 2026
spot_img

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: ಪೋಷಕರ ಸಭೆ

ತೆಕ್ಕಟ್ಟೆ: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ಪೂರ್ವ ಪ್ರಾಥಮಿಕ ಪೋಷಕರ ಸಭೆಯನ್ನು ಆಯೋಜಿಸಲಾಯಿತು.

ಕಾರ್‍ಯಕ್ರಮದಲ್ಲಿ ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್. ಮಾತನಾಡಿ ಬಾಲ್ಯಾವಸ್ಥೆಯ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಹಾಗೂ ಶಿಕ್ಷಕಕರ ಪಾತ್ರ ಮಹತ್ತರವಾಗಿರುತ್ತದೆ ಎಂದು ತಿಳಿಸಿದರು. ಮೊಬೈಲ್ ಹಾಗೂ ಟಿವಿ ಮಾದ್ಯಮಗಳ ಗೀಳು ಚಿಕ್ಕ ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುವುದನ್ನು ತಪ್ಪಿಸಲು ಪೋಷಕರು ಜಾಗೃತರಾಗಿರಬೇಕೆಂದು ತಿಳಿಸಿದರು. ಮಗುವಿನ ಸೂಕ್ಷ್ಮ ಮನಸ್ಸನ್ನು ಶಿಕ್ಷಕರು ಹಾಗೂ ಪೋಷಕರು ಅರ್ಥೈಸಿಕೊಳ್ಳುವಲ್ಲಿ ಸಮರ್ಥರಾಗಬೇಕೆಂದು ಹೇಳಿದರು. ಮಕ್ಕಳಿಗೆ ಬಾಲ್ಯಾವಸ್ಥೆಯಿಂದಲೇ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರದ್ದಾಗಿದೆ ಎಂದು ತಿಳಿಸಿದರು.

ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್  ಎಮ್. ಪ್ರಭಾಕರ ಶೆಟ್ಟಿಯವರು ಕಾರ್‍ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಶಾಲಾ ಪ್ರಾಂಶುಪಾಲರಾದ ಶ್ರೀ ನಿತಿನ್ ಡಿ’ ಆಲ್ಮೇಡಾರವರು ಶಾಲಾ ಶೈಕ್ಷಣಿಕ ಕಾರ್‍ಯ ಯೋಜನೆಗಳ ಮಾಹಿತಿಯನ್ನು ನೀಡಿದರು., ಪೋಷಕರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ ಪೋಷಕರ ಸಂವಾದಕ್ಕೆ ಅವಕಾಶ ಮಾಡಿ ಕೊಡಲಾಯಿತು.

ಶಿಕ್ಷಕಿಯರಾದ ನಾಗರತ್ನ ಹೆಬ್ಬಾರ್ ಕಾರ್‍ಯಕ್ರಮ ನಿರೂಪಿಸಿದರು, ರವೀಂದ್ರ ಕೆ. ಪರಿಚಯಿಸಿ ಸ್ವಾಗತಿಸಿದರು, ಹಾಗೂ ಸುಷ್ಮಾ ಆರ್.ರವರು ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!