Saturday, September 14, 2024

ಬಿ. ಬಿ. ಹೆಗ್ಡೆ ಕಾಲೇಜು – ವಿಶ್ವ ರಕ್ತದಾನಿಗಳ ದಿನ

 

ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿಯ ಸೇವಾ ಯೋಜನೆ ಘಟಕ 1 & 2 ಮತ್ತು ಯುವ ರೆಡ್ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನ ಶಿಬಿರ ಮತ್ತು ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಹೆಚ್ಚು ಬಾರಿ ರಕ್ತದಾನ ಮಾಡಿದ ಕಾಲೇಜಿನ ವಾಣಿಜ್ಯ ಪ್ರಾಧ್ಯಾಪಕರಾದ  ಶರತ್ ಕುಮಾರ್,  ಸುಹಾಸ್ ಜಟ್ಟಿಮನೆ, ಇಂಗ್ಲೀಷ್ ಪ್ರಾಧ್ಯಾಪಕಿ ರವಿನಾ ಸಿ. ಪೂಜಾರಿ, ಛಾಯಾ ಸ್ಟುಡಿಯೋದ ವಿಶ್ವನಾಥ್ ಮುನ್ನ, ವಿದ್ಯಾರ್ಥಿಗಳಾದ ಅಶ್ವಿತ್ ಎಸ್.ಯು., ಆದಿತ್ಯ ಹಾಗೂ ಶಮಂತ್ ಕುಮಾರ್ ಎಚ್.ಆರ್. ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರದ ಸಭಾಪತಿಗಳಾದ  ಜಯಕರ್ ಶೆಟ್ಟಿ ರಕ್ತದಾನದ ಮಹತ್ವದ ಕುರಿತು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರದ ಖಜಾಂಚಿ ಶ್ರೀ ಶಿವರಾಮ ಶೆಟ್ಟಿ, ಡಾ| ಸೋನಿ ಡಿ’ಕೋಸ್ತಾ, ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ಸಂಯೋಜಕರಾದ ಮಾಲತಿ ಕುಂದರ್ ಉಪಸ್ಥಿತರಿದ್ದರು.

ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಯುವ ರೆಡ್ಕ್ರಾಸ್ ಘಟಕದ ಸಂಯೋಜಕರಾದ ಶ್ರೀ ಯೋಗೀಶ್ ಶ್ಯಾನುಭೋಗ್ ವಂದಿಸಿ, ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿಯಾದ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!