spot_img
Saturday, December 7, 2024
spot_img

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ : ಐವರು ದುರ್ಮರಣ

ಜನಪ್ರತಿನಿಧಿ (ಕೋಲ್ಕತ್ತಾ) : ಗೂಡ್ಸ್ ರೈಲು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ  ಇಂದು(ಸೋಮವಾರ) ನಡೆದಿದೆ.

ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ತೆರಳುತ್ತಿದ್ದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ರಾಷ್ಟ್ರೀಯ ಸುದ್ದಿ ಮಾದ್ಯಮಗಳು ವರದಿ ಮಾಡಿವೆ.

ಘಟನಾ ಸ್ಥಳಕ್ಕೆ ವೈದ್ಯರು ಹಾಗೂ ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಎಕ್ಸ್‌ ಖಾತಯಲ್ಲಿ ತಿಳಿಸಿರುವ ಅವರು, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಎಂ, ಎಸ್ಪಿ, ವೈದ್ಯರು, ಅಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಪಾರುಗಾಣಿಕಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

https://x.com/MamataOfficial/status/1802556487371526493

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!