spot_img
Friday, April 3, 2026
spot_img

ಪೋಕ್ಸೋ ಕೇಸ್‌ : ಸಿಐಡಿ ವಿಚಾರಣೆಗೆ ಮಾಜಿ ಸಿಎಂ ಬಿಎಸ್‌ವೈ ಹಾಜರು !

ಜನಪ್ರತಿನಿಧಿ (ಬೆಂಗಳೂರು) : ಪೋಕ್ಸೋ ಕೇಸ್ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಇಂದು(ಸೋಮವಾರ) ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ವಿಚಾರಣೆಗೆ ತೆರಳುವ ಮುಂಚೆ ವರದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ, ನಾನು ಸಿಐಡಿ ವಿಚಾರಣೆಗೆ ತೆರಳುತ್ತಿರುವುದಾಗಿ ಹೇಳಿದರು.

ರಾಜ್ಯದ ಜನತೆ ಈಗಾಗಲೇ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಲೆ ಏರಿಕೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗಿರುವ ರಾಜ್ಯ ಸರ್ಕಾರದ ನಿರ್ಧಾರ ಅಪರಾಧವಾಗಿದೆ. ರಾಜ್ಯ ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದವರು ಒತ್ತಾಯಿಸಿದರು.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ತಾಯಿ ಮಾರ್ಚ್​ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದರು. ಈ ಬಗ್ಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!