spot_img
Saturday, December 7, 2024
spot_img

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ : ವಿಜಯೇಂದ್ರ

ಜನಪ್ರತಿನಿಧಿ (ಬೆಂಗಳೂರು) :  ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳ ಮಾಡಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಾದ್ಯಂತ ಇಂದು(ಸೋಮವಾರ) ಪ್ರತಿಭಟನೆ ನಡೆಸುತ್ತಿದೆ.

ಇಂದು(ಸೋಮವಾರ) ಬೆಂಗಳೂರು, ಮಂಗಳೂರು, ಮಂಡ್ಯ ಒಳಗೊಂಡು ರಾಜ್ಯದ ಹಲವು ಕಡೆಗಳಲ್ಲಿ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ನಾಯಕರು ಸರ್ಕಾರದ ವಿರುದ್ಧ ಧಿಕ್ಕಾರ ಘೋಷಿಸಿ ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ, ರಾಜ್ಯ ಸರ್ಕಾರದ ಜನವಿರೋಧಿ ನಿಲುವಿನ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಎಲ್ಲಾ ಕ್ಷೇತ್ರಗಳ ಮೇಲೆ ನೇರ ಪರಿಣಾಮ ಬೀರಲಿದೆ. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿವೆ.

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದರೆ ಸಾರ್ವಜನಿಕರಿಂದ ಆಕ್ರೋಶಕ್ಕೆ ಕಾರಣವಾಗುತ್ತದೆ ಎಂದು ಅರಿತ ಸರ್ಕಾರ, ಈ ಗ್ಯಾರಂಟಿ ಯೋಜನೆಗಳ ಮುಂದುವರಿಸುವ ಸಲುವಾಗಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.

ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಶಾಸಕರಾದ ಭೈರತಿ ಬಸವರಾಜ್, ಎಂಎಲ್ ಸಿ ರವಿ ಕುಮಾರ್, ಸಿ.ಟಿ ರವಿ, ಡಾ. ಸಿ ಎನ್‌ ಅಶ್ವಥ್‌ ನಾರಾಯಣ್‌ ಸೇರಿ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!