spot_img
Wednesday, January 22, 2025
spot_img

ಸಮೃದ್ಧ ಬೈಂದೂರು 300 ಟ್ರೀಸ್ ಪರಿಕಲ್ಪನೆ: 8 ಸರ್ಕಾರಿ ಶಾಲೆ, 2ಅಂಗನವಾಡಿ ಕೇಂದ್ರದಲ್ಲಿ ಸ್ವಯಂಸ್ಫೂರ್ತಿ ಕೌಶಲ್ಯ ಕೇಂದ್ರ ಜೂ.22ರಂದು ಉದ್ಘಾಟನೆ

ಬೈಂದೂರು: ಬೈಂದೂರು ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕರಾದ ಗುರುರಾಜ ಗಂಟಿಹೊಳೆ ಅವರ ಹಲವು ವಿನೂತನ ಕ್ರಮಗಳನ್ನು ಅನುಷ್ಠಾನ ಮಾಡಿದ್ದಾರೆ. ಸರ್ಕಾರಿ ಶಾಲೆಗಳ ಶ್ರೇಯಾಭಿವೃದ್ಧಿಗಾಗಿ ರೂಪಿಸಿರುವ ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ ಬೆಂಗಳೂರಿನ ಸ್ವಯಂಸ್ಫೂರ್ತಿ ಫೌಂಡೇಶನ್ ವತಿಯಿಂದ ಕ್ಷೇತ್ರದ 8 ಸರ್ಕಾರಿ ಶಾಲೆ ಹಾಗೂ 2ಅಂಗನವಾಡಿ ಕೇಂದ್ರದಲ್ಲಿ ಸ್ವಯಂಸ್ಫೂರ್ತಿ ಕೌಶಲ್ಯ ಕೇಂದ್ರ ತೆರೆಯಲಾಗುವುದು.

ವಿದ್ಯಾರ್ಥಿಗಳ ಕೌಶಲಾಭಿವೃದ್ಧಿಗೆ ಪೂರಕವಾಗಿರುವ ಈ ಸ್ವಯಂಸ್ಫೂರ್ತಿ ಕೌಶಲ್ಯ ಕೇಂದ್ರಗಳನ್ನು ಜೂನ್ ೨೨ರಂದು ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಸ್ವಯಂಸ್ಫೂರ್ತಿ ಫೌಂಡೇಶನ್ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಸ್ಥಳೀಯ ಪ್ರಮುಖರು ಭಾಗವಹಿಸಲಿದ್ದಾರೆ.

ಎಲ್ಲೆಲ್ಲಿ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ?
ನಾಯ್ಕನ ಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಳ್ಳೂರು ೧೧ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
,ಉಳ್ಳೂರು ೧೧ ಅಂಗನವಾಡಿ ಕೇಂದ್ರ,ಕಪ್ಪಾಡಿ ಮುರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅರೇಶಿರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಜಡ್ಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಯ್ಯಂಗಾರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುದೂರು ದುಡ್ಡಿನಗುಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುದೂರು ದುಡ್ಡಿನಗುಳಿ ಅಂಗನವಾಡಿ ಕೇಂದ್ರ, ಕೊಡ್ಲಾಡಿ ಕೂಡಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!