spot_img
Wednesday, April 1, 2026
spot_img

ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ: ಉಚಿತ ನೋಟ್ ಪುಸ್ತಕ ವಿತರಣೆ

 

ಕುಂದಾಪುರ: ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ)ಉಪ್ಪುಂದದ ಡಾ. ಗೋವಿಂದ ಬಾಬು ಪೂಜಾರಿಯವರು ಕೊಡ ಮಾಡಿದ ಸ್ಮಾರ್ಟ್ ಕ್ಲಾಸ್ ನ ಉದ್ಘಾಟನೆ ಹಾಗೂ ಭರತ ಪೌಂಡೇಶನ್ ಮೈಸೂರು ಇದರ ಶ್ರೀಮತಿ ಅರ್ಚನಾ ಭರತ್ ಶೆಟ್ಟಿ ಮತ್ತು ಭರತ್ ಶೆಟ್ಟಿ ಹಂದಕುಂದ ಇವರು ಕೊಡಮಾಡಿದ ಉಚಿತ ನೋಟ್ ಪುಸ್ತಕಗಳ ವಿತರಣಾ ಸಮಾರಂಭ ನೆರವೇರಿತು.

ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ನೆಂಪು ಸಂತೋಷ್ ಕುಮಾರ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಕರ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರಾದ ರಾಜೀವ ನಾಯಕ್, ಎಸ್‌ಡಿ‌ಎಂಸಿ ಉಪಾಧ್ಯಕ್ಷರಾದ ಗಣೇಶ ಸೋಮಯಾಜಿ, ವಿನಾಯಕ ಯುವಕ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ವಿವಿಧ ಪದಾಧಿಕಾರಿಗಳು, ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದರು.

ದಾನಿಗಳಾದ ಗೋವಿಂದ ಬಾಬು ಪೂಜಾರಿ ಹಾಗೂ ಭರತ್ ಶೆಟ್ಟಿ ಅವರ ತಂದೆ ತಾಯಿಯರನ್ನು ಸಮಾರಂಭದಲ್ಲಿ ಗೌರವಿಸಲಾಯಿತು.

ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಕುಪ್ಪಯ್ಯ ಮರಾಠಿ ಸ್ವಾಗತಿಸಿದರು. ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಅಧ್ಯಾಪಕ ರವಿರಾಜ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಧರ ಭಟ್ ವಂದಿಸಿದರು. ಅಧ್ಯಾಪಕ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!