spot_img
Thursday, December 5, 2024
spot_img

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 69 ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​​​ಲೈನ್ ​ಅಥವಾ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜುಲೈ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮೆಟ್ರಿಕ್ಯುಲೇಷನ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ಟೆಲಿಕಮ್ಯುನಿಕೇಷನ್ಸ್/ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ಮೆಕ್ಯಾನಿಕಲ್ ಇಂಜಿನಿಯರಿಂಗ್​​ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 14, 2024ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000-82,660 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸೈಕೋಮೆಟ್ರಿಕ್ ಟೆಸ್ಟ್
ದಾಖಲಾತಿ ಪರಿಶೀಲನೆ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ
BMTC ಕಾಂಪ್ಲೆಕ್ಸ್
K.H. ರಸ್ತೆ
ಶಾಂತಿನಗರ
ಬೆಂಗಳೂರು-560027

ಅಥವಾ

ಆನ್​ಲೈನ್ ಮೂಲಕ ಅಪ್ಲೈ ಮಾಡಬಯಸುವ ಅಭ್ಯರ್ಥಿಗಳಿಗೆ ಈ ಕೆಳಗೆ ಲಿಂಕ್ ನೀಡಲಾಗಿದೆ.
https://recruitr.bmrc.co.in/frminstructions.aspx

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!