Sunday, October 13, 2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗವಕಾಶ : ಇಲ್ಲಿದೆ ಮಾಹಿತಿ

ಜನಪ್ರತಿನಿಧಿ (ಬೆಂಗಳೂರು) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ. ಖಾಲಿ ಇರುವ ಮೆಡಿಕಲ್ ಆಫೀಸರ್, ನರ್ಸ್​​ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ಪೋಸ್ಟ್​​ ​ ಮೂಲಕ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಮೊದಲು ಖಾಲಿ ಹುದ್ದೆಗಳ ಬಗ್ಗೆ ಮಾಹಿತಿ, ಅಗತ್ಯವಿರುವ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಬಗೆಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ :
ಮೆಡಿಕಲ್ ಆಫೀಸರ್- ಎಂಬಿಬಿಎಸ್
ಮಿಡ್​ವೈಫ್/ನರ್ಸ್​​- ಡಿಪ್ಲೊಮಾ, ಬಿ.ಎಸ್ಸಿ
ಲ್ಯಾಬೊರೇಟರಿ ಟೆಕ್ನಿಷಿಯನ್- ಡಿಎಂಎಲ್​ಟಿ, ಬಿ.ಎಸ್ಸಿ

ವಯೋಮಿತಿ:
ಮೆಡಿಕಲ್ ಆಫೀಸರ್- 65 ವರ್ಷ
ಮಿಡ್​ವೈಫ್/ನರ್ಸ್​​- 45 ವರ್ಷ
ಲ್ಯಾಬೊರೇಟರಿ ಟೆಕ್ನಿಷಿಯನ್- 40 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮೆಡಿಕಲ್ ಆಫೀಸರ್- ಮಾಸಿಕ ರೂ. 47,250
ಮಿಡ್​ವೈಫ್/ನರ್ಸ್​​- ಮಾಸಿಕ ರೂ. 18,714
ಲ್ಯಾಬೊರೇಟರಿ ಟೆಕ್ನಿಷಿಯನ್- ಮಾಸಿಕ ರೂ. 18,465

ಉದ್ಯೋಗದ ಸ್ಥಳ: ಬೆಂಗಳೂರು

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಿಕೊಡಬೇಕು.

ಮುಖ್ಯ ವೈದ್ಯಾಧಿಕಾರಿ ಕಚೇರಿ (ಸಾರ್ವಜನಿಕ ಆರೋಗ್ಯ)
#304, ಅನೆಕ್ಸ್-3 ಕಟ್ಟಡ
3ನೇ ಮಹಡಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ
ಎನ್.ಆರ್.ಚೌಕ್
ಬೆಂಗಳೂರು-560002

ಅರ್ಜಿಗಾಗಿ ಅಧಿಕೃತ ವೆಬ್‌ಸೈಟ್‌ ಮೂಲಕ ಪಡೆದುಕೊಳ್ಳಬಹುದು. (ಲಿಂಕ್‌ : https://bbmp.gov.in/home )

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!