Saturday, September 14, 2024

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜೂ.20ರಂದು ಬೈಂದೂರು ‌ಮಂಡಲ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ

ಬೈಂದೂರು: ರಾಜ್ಯದ ಸಂಪತ್ತನ್ನು ಗ್ಯಾರಂಟಿ ಯೋಜನೆಗೆ ಬಳಸಿ ಖಜನೆ ಖಾಲಿಯಾಗಿದ್ದು, ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕೈ ಹಾಕಿರುವ ರಾಜ್ಯ  ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಿಲುವು ಖಂಡಿಸಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಜೂ.20ರ ಸಂಜೆ 5 ಗಂಟೆಗೆ ಉಪ್ಪುಂದ ಅಂಬಾಗಿಲಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಲೋಕಸಭೆ ಚುನಾವಣೆ ‌ಕಡಿಮೆ ಸೀಟು ಬಂದಂತೆ ರಾಜ್ಯ ಕಾಂಗ್ರೆಸ್ ವಿಚಲಿತಗೊಂಡಿದೆ. ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವ ಬಗ್ಗೆಯೂ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವೂ ಆಗುತ್ತಿಲ್ಲ. ಇದೆಲ್ಲದ ನಡುವೆ ಏಕಾಏಕಿ  ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 3 ರೂ. ಏರಿಸುವ ಮೂಲಕ ಜನ ಸಾಮಾನ್ಯರಿಗೆ ಆರ್ಥಿಕ ಹೊರೆ ನೀಡಿದೆ. ರಾಜ್ಯ ಸರ್ಕಾರದ ಈ ನಿರ್ಧಾರ ಖಂಡಿಸಿ ಜೂ.20ರ ಸಂಜೆ 5 ಗಂಟೆಗೆ ಉಪ್ಪುಂದ ಅಂಬಾಗಿಲಿನಲ್ಲಿ ಬೃಹತ್ ಪ್ರತಿಭಟನೆಯನ್ನು ಬೈಂದೂರು ಮಂಡಲ ಬಿಜೆಪಿ ಹಮ್ಮಿಕೊಂಡದೆ. ಶಾಸಕರಾದ ಗುರುರಾಜ್ ಗಂಟಿಹೊಳೆ ಸೇರಿದಂತೆ ಪಕ್ಷದ ನಾಯಕರು, ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬೈಂದೂರು ಮಂಡಲ ಬಿಜೆಪಿ  ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!