spot_img
Wednesday, April 1, 2026
spot_img

ಬಾರ್ಕೂರು ಹನೆಹಳ್ಳಿ ಕೊಲೆ ಪ್ರಕರಣ : ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಜನಪ್ರತಿನಿಧಿ  (ಬ್ರಹ್ಮಾವರ) : ಬ್ರಹ್ಮಾವರ ತಾಲೂಕಿನ ಬಾರ್ಕೂರಿನ ಹನೆಹಳ್ಳಿ ಗ್ರಾಮದ ಮೂಡುತೋಟ ನಿವಾಸಿ, ಪರಿಶಿಷ್ಟ ಜನಾಂಗದ ಕೃಷ್ಣ ಎನ್ನುವವರ ಕೊಲೆಯಾಗಿ ಬರೋಬ್ಬರಿ 3 ತಿಂಗಳಾದರೂ ದುಷ್ಕರ್ಮಿಗಳನ್ನು ಪತ್ತೆ ಮಾಡಲು ಪೊಲೀಸ್‌ ಇಲಾಖೆ ವಿಫಲವಾಗಿದೆ.

ಕೊಲೆಗೈದಿರುವ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಬೇಕು ಎಂದು ಆಗ್ರಹಿಸಿ ಸಮತಾ ಸೈನಿಕ ದಳದ ಆಶ್ರಯದಲ್ಲಿ ಇಲ್ಲಿ ಪ್ರತಿಭಟನೆ ಮಾಡಲಾಯಿತು.

ಸಿಐಟಿಯು ಮುಖಂಡ ಬಾಲಕೃಷ್ಣ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಅನ್ಯಾಯವಾದಾಗ ಶ್ರೀಮಂತರಿಗೆ ಒಂದು ನ್ಯಾಯ, ದಲಿತರಿಗೆ, ಬಡವರಿಗೆ ಒಂದು ನ್ಯಾಯ ಸಲ್ಲದು. ಎಂತಹ ಕೊಲೆ ಪ್ರಕರಣವನ್ನೂ ಭೇದಿಸಲಾಗುತ್ತದೆ. ಹನೆಹಳ್ಳಿ ಎಂಬ ಚಿಕ್ಕ ಹಳ್ಳಿಯಲ್ಲಿ ಕೃಷ್ಣ ಎನ್ನುವ ಪರಿಶೀಷ್ಟ ಜನಾಂಗದ ಕೃಷ್ಣ ಎಂಬಾತನನ್ನು ಕೊಲೆಗೈದಿರುವ ದುಷ್ಕರ್ಮಿಗಳನ್ನು ಬಂಧಿಸುವುದಕ್ಕೆ ಮೂರು ತಿಂಗಳಾದರೂ ಇನ್ನೂ ಆಗದೇ ಇರುವುದು ಆಶ್ಚರ್ಯದ ಸಂಗತಿ. ಇಲಾಖೆ ತ್ವರಿತವಾಗಿ ಆರೋಪಿಗಳನ್ನು ಬಂಧಿಸಬೇಕು ಎಂದವರು ಆಕ್ರೋಶ ಹೊರ ಹಾಕಿದರು.

ಸಮತಾ ಸೈನಿಕ ದಳ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ ಮಾತನಾಡಿ, ಹನೆಹಳ್ಳಿಯ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕವಾದ ತನಿಖೆ ನಡೆಯಲೇ ಇಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿದ್ದಾರೆ. ಉನ್ನತ ಮಟ್ಟದ ತನಿಖೆಗಾಗಿ ಸಿಒಡಿಗೆ ಒದಗಿಸಬೇಕು.  ರಾಜ್ಯಾದ್ಯಂತ ನ್ಯಾಯ ದೊರಕುವವರೆಗೆ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಆರೋಪಿಗಳನ್ನು ಶೀಘ್ರಮುಖವಾಗಿ ಬಂಧಿಸುವಂತೆ ಮನವಿ ಸಲ್ಲಿಸಲಾಯಿತು.

ಕಳೆದ ಮಾರ್ಚ್ 2ರಂದು ರಾತ್ರಿ ಮನೆಯಲ್ಲಿ ಬಾರ್ಕೂರಿನ ಹನೆಹಳ್ಳಿಯ ಕೃಷ್ಣ ಎಂಬಾತನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!