spot_img
Wednesday, April 1, 2026
spot_img

ಕಿಟಕಿಯ ಗ್ರಿಲ್‌ ಮುರಿದು ಒಳನುಸುಳಿ ಕಳ್ಳತನಕ್ಕೆ ಯತ್ನಿಸಿ ವಿಫಲ | ಸಿಸಿ ಟಿವಿಯಲ್ಲಿ ಘಟನೆ ಸೆರೆ

ಜನಪ್ರತಿನಿಧಿ (ಮುಳ್ಳಿಕಟ್ಟೆ) : ಮುಳ್ಳಿಕಟ್ಟೆಯ ಕ್ರಾಸ್ ಬಳಿ ಇರುವ ಪಂಚಗಂಗಾ ವ್ಯವಸಾಯ ಸೇವಾ ಸಹಕಾರಿ ಸಂಘ ಹೊಸಾಡು ಶಾಖೆಯಲ್ಲಿ ಅಪರಾತ್ರಿ ಕಿಡಿಗೇಡಿಯೋರ್ವ, ಕಿಟಕಿಯ ಗ್ರಿಲ್‌ ಮುರಿದು ಒಳನುಸುಳಿ ಕಳ್ಳತನಕ್ಕೆ ಯತ್ನಿಸಿ ವಿಫಲವಾದ ಘಟನೆ ಸಿಸಿ ಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ.

ಘಟನೆ ನಡೆದಿರುವುದು ಗಮನಕ್ಕೆ ಬಂದ ಕೂಡಲೇ ಸ್ಥಳೀಯ ಪೋಲೀಸರಿಗೆ ಮಾಹಿತಿ ನೀಡಲಾಗಿದ್ದು, ಕಳ್ಳತನ ಮಾಡಲು ಯತ್ನಿಸಿದ ಕೇರಳದ ಮೂಲದ ವ್ಯಕ್ತಿಯನ್ನು ಕೂಡಲೇ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಳ್ಳತನಕ್ಕೆ ಯತ್ನಿಸುತ್ತಿರುವಾಗಲೇ ಸ್ಥಳಕ್ಕಾಗಮಿಸಿದ ಪೊಲೀಸರು ಕಿಡಿಗೇಡಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸರ ಕಾರ್ಯಾಚರಣೆಗೆ ಎಲ್ಲೆಡೆ ಈಗ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!