Sunday, September 8, 2024

1,563 ವಿದ್ಯಾರ್ಥಿಗಳಿಗೆ ನಾಳೆ NEET ಮರು ಪರೀಕ್ಷೆ !

ಜನಪ್ರತಿನಿಧಿ (ನವ ದೆಹಲಿ) : ದೇಶದಾದ್ಯಂತ ದೊಡ್ಡ ಮಟ್ಟದ ವಿವಾದ, ಟೀಕೆಗೆ ಕಾರಣವಾಗಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ, ಪರೀಕ್ಷೆಯಲ್ಲಿ ಕೃಪಾಂಕ ಪಡೆದಿದ್ದ 1,563 ವಿದ್ಯಾರ್ಥಿಗಳಿಗೆ ನಾಳೆ (ಜೂ.23ರ ಭಾನುವಾರ) ಮರು ಪರೀಕ್ಷೆ ನಡೆಯಲಿದೆ.

ದೇಶದ 7 ಪರೀಕ್ಷಾ ಕೇಂದ್ರಗಳಲ್ಲಿ ನಿಗದಿಯಾಗಿರುವ ನೀಟ್‌ ಪರೀಕ್ಷೆ ನಡೆಯುವ ಸಂದರ್ಭದಲ್ಲಿ, ಪರೀಕ್ಷೆ ಯಾವುದೇ ಸಮಸ್ಯೆಯಿಲ್ಲದೇ ನಡೆಸುವ ಉದ್ದೇಶದಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಹಾಗೂ ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಪರೀಕ್ಷಾ ಕೇಂದ್ರದಲ್ಲಿ ಉಪಸ್ಥಿತರಿರಲಿದ್ದಾರೆ. ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಪೂರ್ವ ಪರಿಶೀಲನೆ ನಡೆಸಲಾಗಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

ಮೇಘಾಲಯ, ಹರ್ಯಾಣ, ಛತ್ತೀಸಗಢ, ಗುಜರಾತ್‌ ಹಾಗೂ ಚಂಡೀಗಢದ ಆರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯ ಪ್ರಾರಂಭದ ವಿಳಂಬದಿಂದಾಗಿ ಸಮಯದ ನಷ್ಟವನ್ನು ಸರಿದೂಗಿಸಿದ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಕೃಪಾಂಕಗಳನ್ನು ಸಂಸ್ಥೆ ಹಿಂದಕ್ಕೆ ತೆಗೆದುಕೊಂಡ ನಂತರ ವೈದ್ಯಕೀಯ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದ ನೀಟ್ ಮರು ಪರೀಕ್ಷೆಯನ್ನು ನಾಳೆ ನಡೆಸಲಾಗುತ್ತಿದೆ.

ಈ ಬಾರಿಯ ನೀಟ್‌ ಪರೀಕ್ಷೆಯಲ್ಲಿ 67 ಪರೀಕ್ಷಾರ್ಥಿಗಳು 720ಕ್ಕೆ 720 ಅಂಕ ಗಳಿಸುವುದರ ಮೂಲಕ ಟಾಪರ್ ಆಗಿ ಮೂಡಿ ಬಂದಿದ್ದು, ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಈ ಪೈಕಿ 6 ಜನರು ಕೃಪಾಂಕ ಪಡೆದು ಟಾಪರ್‌ ಆಗಿದ್ದರು. ಪರೀಕ್ಷಾ ಸಂಸ್ಥೆ ಹಾಗೂ ಕೇಂದ್ರ ಶಿಕ್ಷಣ ಇಲಾಖೆಯ ಮೇಲೆ ಪ್ರತಿಪಕ್ಷಗಳು ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಟೀಕೆ ವ್ಯಕ್ತವಾಗಿತ್ತು.

ಇನ್ನು, NEET ಹಗರಣದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು ಜಾರಿ ಮಾಡಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮ ತಡೆಗಟ್ಟುವ ಕಾನೂನು ಜೂ.21 ರಿಂದಲೇ ಜಾರಿಗೆ ಬಂದಿದೆ. ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ, 2024 ಭಾರತದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಶಾಸನವಾಗಿದ್ದು, ವಂಚನೆಯನ್ನು ತಡೆಯುವ ಮತ್ತು ಸಾರ್ವಜನಿಕ ಪರೀಕ್ಷೆಗಳ ಸಮಗ್ರತೆಯನ್ನು ಎತ್ತಿಹಿಡಿಯುವ ಗುರಿಯನ್ನು ಹೊಂದಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!