Saturday, October 12, 2024

ಲೈಂಗಿಕ ದೌರ್ಜನ್ಯ-ಕೊಲೆ ಪ್ರಕರಣ : ಪ್ರಜ್ವಲ್‌, ಬಿಎಸ್‌ವೈ, ದರ್ಶನ್‌ ವಿರುದ್ಧ ಆಕ್ರೋಶ ಹೊರ ಹಾಕಿದ ಮೋಹಕ ತಾರೆ ರಮ್ಯಾ !

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದಲ್ಲಿ ಬಾರಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ, ಕೊಲೆ ಆರೋಪ ಪ್ರಕರಣಗಳ ಬಗ್ಗೆ ಸ್ಯಾಂಡಲ್‌ವುಡ್‌ನ ಮೋಹಕ ತಾರೆ ರಮ್ಯಾ ಯಾನೆ ದಿವ್ಯ ಸ್ಪಂದನಾ ಟ್ವೀಟಾಸ್ತ್ರದ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ನಟ ದರ್ಶನ್‌, ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪ ಹಾಗೂ ಸೂರಜ್‌ ರೇವಣ್ಣ ವಿರುದ್ಧ ರಮ್ಯಾ ಕಿಡಿ ಕಾರಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಖಾತೆ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ರಮ್ಯಾ, ಕಾನೂನು ಉಲ್ಲಂಘಿಸಿರುವ ಶ್ರೀಮಂತರು ಹಾಗೂ ಪ್ರಭಾವಿಶಾಲಿಗಳು ಸದ್ಯ ಸುದ್ದಿಯಲ್ಲಿದ್ದಾರೆ. ಇವರ ಹಿಂಸಾತ್ಮಕ ಕೃತ್ಯಗಳಿಂದಾಗಿ ಬಡವರು, ಮಹಿಳೆಯರು ಹಾಗೂ ಮಕ್ಕಳ ಬಾಳು ಹಾಳಾಗಿದೆ. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಹಾಗೂ ಮಾಧ್ಯಮಗಳಿಗೆ ಅಭಿನಂದನೆಗಳನ್ನು ಹೇಳಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ತ್ವರಿತಗೊಳಿಸಿ ಪ್ರಕರಣ ತಾರ್ತಿಕ ಅಂತ್ಯ ಕಂಡಾಗ ನಿಜವಾದ ನ್ಯಾಯ ಸಿಗುತ್ತದೆ. ನ್ಯಾಯ ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶ ರವಾನೆ ಮಾಡುತ್ತೇವೆ ? ಎಂದು ಹೇಳಿದ್ದಾರೆ.

https://x.com/divyaspandana/status/1804370772775047171

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ವಿರುದ್ಧ ಜೆಡಿಎಸ್‌ ಕಾರ್ಯಕರ್ತನೋರ್ವನಿಗೆ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ.

ಇನ್ನು, ಈ ಹಿಂದೆ ರಮ್ಯಾ ನಟ ದರ್ಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ಹಾಕಿದ್ದರು. ಆತನಿಗೆ (ದರ್ಶನ್‌) ದೊರಕಿರುವ ಜನಪ್ರಿಯತೆ ತಲೆಗೇರಿದೆ. ಪದೇ ಪದೇ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದು ಸಾಮಾನ್ಯ ಎಂಬಂತಾಗಿದೆ. ಹಿಂದೆಯೂ ಅವರು ತಪ್ಪು ಮಾಡಿದ್ದಾರೆ. ಆದರೆ ಪದೇ ಪದೇ ಇಂತಹ ತಪ್ಪುಗಳನ್ನು ಮಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ. ದರ್ಶನ್‌ಗೆ ದೊಡ್ಡ ಅಭಿಮಾನಿಗಳ ಇದೆ ಎಂದು ಬಿಂಬಿಸಲಾಗಿದೆ. ಪೊಲೀಸ್‌ ಠಾಣೆ ಮುಂದೆ ಜನ ಸೇರಿದ ಮಾತ್ರಕ್ಕೆ ಆತ ಪ್ರಭಾವಿ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!