spot_img
Saturday, December 7, 2024
spot_img

ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಜೈಲುಪಾಲು | ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್‌

ಜನಪ್ರತಿನಿಧಿ (ಬೆಂಗಳೂರು) : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಹಾಗೂ ʼಡಿ ಗ್ಯಾಂಗ್ʼ ಜೈಲು ಪಾಲಾಗಿದ್ದು, ನಾಲ್ವರು ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಇಂದು (ಶನಿವಾರ) ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು ಅವರನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

ಪ್ರಕರಣದ ಮೊದಲನೇ ಆರೋಪಿ ಹಾಗೂ ನಟ ದರ್ಶನ್‌ ಪ್ರಿಯತಮೆ ಪವಿತ್ರಾ ಗೌಡ ಹಾಗೂ ಇತರರಿಗೆ ಎರಡು ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ರೇಣುಕಾ ಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಜೂನ್ 11 ರಿಂದ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಇಂದು ದರ್ಶನ್ ಜೈಲು ಪಾಲಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ.

ರೇಣುಕಾಸ್ವಾಮಿ ಎಂಬ ವ್ಯಕ್ತಿಯು ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್​ ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಚಿತ್ರದುರ್ಗದಿಂದ ಅಪಹರಿಸಿ ತಂದು ಪಟ್ಟಣಗೆರೆ ಎಂಬಲ್ಲಿರುವ ಶೆಡ್‌ವೊಂದರಲ್ಲಿ ಹತ್ಯೆ ಮಾಡಿ ರಾಜಕಾಲುವೆಗೆ ಎಸೆಯಲಾಗಿತ್ತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!