spot_img
Thursday, December 5, 2024
spot_img

ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ಕೊಡುಗೆ: ‘ಸಹಕಾರ ಸಿರಿ’ ಬಸ್ಸು ಪ್ರಯಾಣಿಕ ತಂಗುದಾಣ ಉದ್ಘಾಟನೆ

ಕುಂದಾಪುರ: (ಜನಪ್ರತಿನಿಧಿ ವಾರ್ತೆ) ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಜಡ್ಕಲ್ ಚರ್ಚ್ ಸಮೀಪ ನಿರ್ಮಿಸಿರುವ ‘ಸಹಕಾರ ಸಿರಿ’ ಬಸ್ಸು ಪ್ರಯಾಣಿಕ ತಂಗುದಾಣದ ಉದ್ಘಾಟನೆ ಜೂನ್ 22 ಶನಿವಾರ ನಡೆಯಿತು.

ಕುಂದಾಪುರ ಉಪ-ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಬಸ್ ಪ್ರಯಾಣಿಕರ ತಂಗುದಾಣ ಉದ್ಘಾಟಿಸಿದರು.

ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ಪ್ರಧಾನ ಕಛೇರಿಯ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಜಡ್ಕಲ್ ಚರ್ಚ್ ಧರ್ಮಗುರುಗಳಾದ ರೇ|ಫಾ.ಮಾಣಿ ವಿ.ಎಂ ಉದ್ಘಾಟಿಸಿ ಶುಭ ಹಾರೈಸಿದರು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್.ರಾಜು ಪೂಜಾರಿ ಮಾತನಾಡಿ, ಸಹಕಾರ ಕ್ಷೇತ್ರ ಇವತ್ತು ಜನರ ವಿಶ್ವಾಸ ಗಳಿಸಿಕೊಂಡು ಬಲಿಷ್ಠವಾಗಿ ಬೆಳೆಯುತ್ತಿದೆ. ಸಾರ್ವಜನಿಕ ಸೇವೆಯಲ್ಲಿಯೂ ಕೂಡಾ ಗುರುತಿಸಿಕೊಳ್ಳುತ್ತಿದೆ. ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘ ಅತ್ಯಂತ ವೇಗವಾಗಿ ಬೆಳವಣಿಗೆ ಕಂಡುಕೊಂಡಿದೆ. ಸಹಕಾರ ಕ್ಷೇತ್ರದಲ್ಲಿ ಜನರಿಗೆ ಉತ್ತಮ ಸೇವೆ ನೀಡಿದಾಗ ಸಹಕಾರಿ ಸಂಘವೂ ಅಭಿವೃದ್ಧಿ ಹೊಂದುತ್ತದೆ ಎನ್ನುವುದಕ್ಕೆ ಸಾಕ್ಷಿ. ಸಾರ್ವಜನಿಕ ಸೇವೆಯ ಉದ್ದೇಶದಿಂದ ಬಸ್ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿರುವುದು ಶ್ಲಾಘನಾರ್ಹ ಕಾರ್ಯ ಎಂದರು.

ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಜಡ್ಕಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಘದ ಆಡಳಿತ ಮಂಡಳಿಯ ಸರ್ವಾನುಮತದ ನಿರ್ಣಯದಂತೆ ಬಸ್ ಪ್ರಯಾಣಿಕರ ತಂಗುದಾಣ ನಿರ್ಮಿಸಿದ್ದೇವೆ. ಈ ಸಂಘವು ಸದಸ್ಯರ ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಸೇವೆಯೇ ಉಸಿರು ಎನ್ನುವಂತೆ ಕೆಲಸ ಮಾಡುತ್ತಿದ್ದೇವೆ. ನಮ್ಮ ಸಂಘದ ಬೆಳವಣಿಗೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಾರ್ಗದರ್ಶನ ಸಹಕಾರವನ್ನು ಮರೆಯುವಂತಿಲ್ಲ ಎಂದರು.

ಈ ಸಂದರ್ಭದಲ್ಲಿ ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವೆಂಕಟರಮಣ ಶರ್ಮ ಅವರನ್ನು ದಂಪತಿ ಸಹಿತವಾಗಿ ಸನ್ಮಾನಿಸಲಾಯಿತು.

ಜೂನ್ 30ರಂದು ನಿವೃತ್ತರಾಗಲಿರುವ ಕುಂದಾಪುರ ಉಪ-ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಂ.ಮಹೇಶ್ ಹೆಗ್ಡೆ, ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪಾರ್ವತಿ ಭಾಗವಹಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಸುರೇಂದ್ರ ನಾಯ್ಕ, ಮಹಾಬಲ ಪೂಜಾರಿ, ಜೋಸೆಫ್ ಕೆ.ಎಂ., ವಿನೋದ್ ಜಾರ್ಜ್, ಗುರುರಾಜ ಪೂಜಾರಿ, ರೋಸಮ್ಮ, ರವೀಂದ್ರ ಶೆಟ್ಟಿ, ನಾಗರತ್ನ ಶೆಟ್ಟಿ, ಪುನೀತ್ ಶೆಟ್ಟಿ, ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ನಾಯ್ಕ್ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷರಾದ ದೇವದಾಸ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಸನ್ನ ಶರ್ಮ ಪ್ರಾರ್ಥನೆ ಮಾಡಿದರು. ನಿರ್ದೇಶಕ ವಿನೋದ್ ಜಾರ್ಜ್ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!