spot_img
Saturday, February 14, 2026
spot_img

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: ಯೋಗ ದಿನಾಚರಣೆ

ತೆಕ್ಕಟ್ಟೆ: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ಜೂನ್ ೨೧ ರಂದು ಅಂತರಾಷ್ಟ್ರೀಯ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಕೆ.ಪಿ.ಟಿಸಿ.ಎಲ್.ನ ಜೂನಿಯರ್ ಎಂಜಿನಿಯರ್ ಗಣೇಶ್ ಯೋಗ ಪ್ರಾತ್ಯಕ್ಷಿಕೆಯನ್ನು ಮಾಡಿ ತೋರಿಸಿದರು.

ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್ ಮಾತನಾಡಿ ಭಾರತೀಯ ಸಂಸ್ಕ್ರತಿಯ ಅಂಗವಾಗಿರುವ ಯೋಗದಿಂದ ಇಡೀ ವಿಶ್ವವೇ ಪ್ರಯೋಜನವನ್ನು ಪಡೆದುಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯೋಗಾಭ್ಯಾಸವನ್ನು ಮೈಗೂಡಿಸಿಕೊಂಡಲ್ಲಿ ಆರೋಗ್ಯಪೂರ್ಣ ಜೀವನ ನಡೆಸಲು ಅನುಕೂಲವೆಂದು ತಿಳಿಸಿದರು.

ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್‍ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ ಆಲ್ಮೇಡಾ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅದ್ವಿತ್ ಕಾರ್‍ಯಕ್ರಮ ನಿರೂಪಿಸಿದರು, ಇಂಚರ ಸ್ವಾಗತಿಸಿದರು, ತುಷಾರ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!