spot_img
Tuesday, March 31, 2026
spot_img

ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಉಪನ್ಯಾಸಕದ್ವಯರ ಬೀಳ್ಕೊಡುಗೆ

ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ  ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ವಿಭಾಗದ ಉಪನ್ಯಾಸಕರಾಗಿ ಒಟ್ಟಾರೆ 34 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ  ವಯೋನಿವೃತ್ತಿ ಹೊಂದಿದ ಹೆಚ್ ಭಾಸ್ಕರ ಶೆಟ್ಟಿ  ಮತ್ತು ನಿವೃತ್ತಿಯ ಬಳಿಕ ಎರಡು ವರ್ಷಗಳ ಕಾಲ  ದೈಹಿಕ ಶಿಕ್ಷಣ ಉಪನ್ಯಾಸಕರಾಗಿ  ವಿಶೇಷ ಸೇವೆಯನ್ನು ಸಲ್ಲಿಸಿದ ನಾಗರಾಜ ಶೆಟ್ಟಿ ಅವರ ಬೀಳ್ಕೊಡುಗೆ ಸಮಾರಂಭವು ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಕಳೆದ ಶನಿವಾರ ನಡೆಯಿತು.
 
 ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಜಿಎಸ್​​ವಿಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಸಂಚಾಲಕ ಎನ್ ಸದಾಶಿವ ನಾಯಕ್,  ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ  ನಿವೃತ್ತ ಉಪನ್ಯಾಸಕರನ್ನು  ಅಭಿನಂದಿಸಿ ಮಾತನಾಡಿದರು.
 
 ಹಿಂದಿ ಭಾಷಾ  ಉಪನ್ಯಾಸಕರಾದ ನಾರಾಯಣ ಈ ನಾಯ್ಕ್ ನಿವೃತ್ತರ ಸಾಧನೆಗಳನ್ನು ಪರಿಚಯಿಸಿದರು. ,  ಈ ಸಂದರ್ಭದಲ್ಲಿ  ಭಾಸ್ಕರ್ ಶೆಟ್ಟಿ ಮತ್ತು ಶೋಭಾ ರಾಣಿ ದಂಪತಿ ಹಾಗೂ  ನಾಗರಾಜ ಶೆಟ್ಟಿ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
 
.ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ, ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕಿ ಲವೀನ ಸಾವಿಯಾ ಸಿಕ್ವೇರಾ ಉಪಸ್ಥಿತರಿದ್ದರು.
 
ಹೈಸ್ಕೂಲ್ ವಿಭಾಗದ ಕಚೇರಿ ಮುಖ್ಯಸ್ಥರಾದ ಶ್ರೀಧರ್ ಗಾಣಿಗ ಪ್ರಸ್ತಾವಿಕ ಮಾತುಗಳನ್ನಾಡಿ  ಸ್ವಾಗತಿಸಿದರು.  ಕಚೇರಿ ಪ್ರಬಂಧಕರಾದ ಪ್ರಮೋದ ಪೈ ಎಮ್. ಜಿ ಧನ್ಯವಾದ ಅರ್ಪಿಸಿದರು. ಕನ್ನಡ ಉಪನ್ಯಾಸಕ ಸುಜಯೀoದ್ರ ಹಂದೆ ನಿರ್ವಹಿಸಿದರು  ಆಂಗ್ಲ ಭಾಷೆ ಉಪನ್ಯಾಸಕಿ ಸುಪ್ರೀತ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!