spot_img
Saturday, December 7, 2024
spot_img

ನೀಟ್‌ ಮರುಪರೀಕ್ಷೆ : ಅರ್ಧದಷ್ಟು ಪರೀಕ್ಷಾರ್ಥಿಗಳು ಗೈರು : ಎನ್‌ಟಿಎ

ಜನಪ್ರತಿನಿಧಿ (ನವ ದೆಹಲಿ) : ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕೃಪಾಂಕ ಅಥವಾ ಗ್ರೇಸ್‌ ಮಾರ್ಕ್‌ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್‌ 23 ಭಾನುವಾರ ಮರು ಪರೀಕ್ಷೆ ಮಾಡಲಾಗಿತ್ತು, ಆದರೇ ಪರೀಕ್ಷೆಗೆ ಅರ್ಧದಷ್ಟು ಪರೀಕ್ಷಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಿಳಿಸಿದೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,563 ವಿದ್ಯಾರ್ಥಿಗಳ ಪೈಕಿ 750 ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ NTA ಮಾಹಿತಿ ನೀಡಿದೆ

ಚಂಡೀಗಢ, ಗುಜರಾತ್‌, ಹರಿಯಾಣ, ಮೇಘಾಲಯ ಒಳಗೊಂಡು ಒಟ್ಟು ಆರು ರಾಜ್ಯಗಳ ನಗರಗಳಲ್ಲಿ ಮರು ಪರೀಕ್ಷೆ ನಡೆದಿದ್ದು, ಮರು ಪರೀಕ್ಷೆಗೆ 813 ಪರೀಕ್ಷಾರ್ಥಿಗಳು ಮಾತ್ರ ಹಾಜರಾಗಿದ್ದಾರೆ. ಛತ್ತೀಸ್‌ಗಢದಲ್ಲಿ 602 ಅಭ್ಯರ್ಥಿಗಳ ಪೈಕಿ 291 ವಿದ್ಯಾರ್ಥಿಗಳು ಹಾಜರಾದರೆ, ಹರಿಯಾಣದಲ್ಲಿ 494 ಅಭ್ಯರ್ಥಿಗಳ ಪೈಕಿ 287, ಮೇಘಾಲಯದಲ್ಲಿ 464 ವಿದ್ಯಾರ್ಥಿಗಳ ಪೈಕಿ 234 ಅಭ್ಯರ್ಥಿಗಳು ಮಾತ್ರ ಹಾಜರಾದರು. ಗುಜರಾತ್‌ ಕೇಂದ್ರದಲ್ಲಿ ಕೇವಲ ಒಬ್ಬ ವಿದ್ಯಾರ್ಥಿ ಮಾತ್ರ ಮರು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಎನ್‌ಟಿಎ ತಿಳಿಸಿದೆ.

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಗಿತ್ತ. 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಚರ್ಚೆಗೆ ಕಾರಣವಾಗಿತ್ತು. ಪ್ರತಿಪಕ್ಷಗಳು ನೀಟ್‌ ಪರೀಕ್ಷೆಗಳಲ್ಲಿ ಆದ ಅಕ್ರಮಗಳ ವಿರುದ್ಧ ಬಾರಿ ದೊಡ್ಡ ಮಟ್ಟದಲ್ಲಿ ಟೀಕೆ ಮಾಡಿದ್ದವು. ನೀಟ್‌ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳೂ ಕೂಡ ಕೇಂದ್ರ ಶಿಕ್ಷಣ ಇಲಾಖೆ ಹಾಗೂ ಎನ್‌ಟಿಎ ವಿರುದ್ಧ ದೇಶದಾದ್ಯಂತ ಪ್ರತಿಭಟಿಸಿದ್ದರು. ಗ್ರೇಸ್‌ ಅಂಕಗಳನ್ನು ಪಡೆದಿದ್ದ 1,563 ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು.

ಗ್ರೇಸ್ ಅಂಕದ ವಿವಾದ ದೇಶಾದ್ಯಂತ ಹರಡುತ್ತಿದ್ದಂತೆ ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. 1,563 ಅಭ್ಯರ್ಥಿಗಳಲ್ಲಿ ಯಾರಾದರೂ ಮರುಪರೀಕ್ಷೆಯಿಂದ ಹೊರಗುಳಿದಿದ್ದರೆ ಗ್ರೇಸ್ ಅಂಕಗಳಿಲ್ಲದ ಅವರ ಹಿಂದಿನ ಅಂಕಗಳನ್ನು ಫಲಿತಾಂಶಗಳಿಗಾಗಿ ಬಳಸಲಾಗುತ್ತದೆ ಎಂದೂ ಕೇಂದ್ರ ಕೋರ್ಟ್‌ಗೆ ತಿಳಿಸಿತ್ತು. ಅದರಂತೆ ಪರೀಕ್ಷೆ ನಡೆಸಿದ್ದು, ಜೂನ್‌ 30ರೊಳಗೆ ಫಲಿತಾಂಶ ಪ್ರಕಟಿಸಲಿದೆ.

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆಯ ಹೊಣೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ. ಅದರಂತೆ ತನಿಖೆ ಆರಂಭಿಸಿರುವ ಸಿಬಿಐ, ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿಕೊಂಡಿದೆ. ಹಾಗೆಯೇ, ಇನ್ನೂ ಹಲವು ರಾಜ್ಯಗಳಲ್ಲಿ ಎಫ್‌ಐಆರ್‌ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

ಆಧಾರ : ಪಿಟಿಐ ಸುದ್ದಿ ಸಂಸ್ಥೆ

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!