spot_img
Wednesday, April 1, 2026
spot_img

ವಿಧಾನ ಪರಿಷತ್‌ ಸದಸ್ಯರಾಗಿ 17 ನೂತನ ಶಾಸಕರಿಂದ ಪ್ರಮಾಣ ವಚನ !

ಜನಪ್ರತಿನಿಧಿ (ಬೆಂಗಳೂರು) : ವಿಧಾನಸಭೆ ಹಾಗೂ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ಹೊಸದಾಗಿ ಆಯ್ಕೆಯಾದ ಒಟ್ಟು 17 ಸದಸ್ಯರು ಇಂದು (ಸೋಮವಾರ) ಪ್ರಮಾಣ ವಚನ ಸ್ವೀಕಾರ ಮಾಡಿದರು.

ವಿಧಾನ ಪರಿಷತ್‌ಗೆ ವಿಧಾನಸಭೆಯಿಂದ ಆಯ್ಕೆಯಾದ ಐವನ್ ಡಿಸೋಜ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾ‌ರ್, ಬಿಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಸಿದ್ದರಾಮಯ್ಯ, ಎ. ವಸಂತ ಕುಮಾರ, ಮೂಳೆ ಮಾರುತಿರಾವ್‌, ಟಿ.ಎನ್‌. ಜವರಾಯಿ ಗೌಡ, ಸಿ.ಟಿ. ರವಿ ಮತ್ತು ಎನ್‌.ರವಿಕುಮಾ‌ರ್ ಮಾತ್ರವಲ್ಲದೇ, ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ ಪಾಟೀಲ ಬಸವರಾಜ, ಡಾ. ಧನಂಜಯ್‌ ಸರ್ಜಿ, ರಾಮೋಜಿಗೌಡ, ಎಸ್‌.ಎಲ್‌. ಬೋಜೇಗೌಡ, ಕೆ. ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!