spot_img
Wednesday, December 4, 2024
spot_img

10 ವರ್ಷಗಳ ಅಘೋಷಿತ ತುರ್ತು ಪರಿಸ್ಥಿತಿ ಬಗ್ಗೆಯೂ ಮಾತನಾಡಿ : ಖರ್ಗೆ

ಜನಪ್ರತಿನಿಧಿ (ನವದೆಹಲಿ) : ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡುತ್ತಾ ಎಷ್ಟು ದಿನಗಳ ಕಾಲ ಆಡಳಿತ ನಡೆಸಲು ಬಯಸುತ್ತೀರಿ? ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಲ್ಲದೇ, ಕಳೆದ 10 ವರ್ಷಗಳ ಅಘೋಷಿತ ತುರ್ತು ಪರಿಸ್ಥಿತಿ ಬಗ್ಗೆಯೂ ಮಾತನಾಡಿ ಎಂದು ತಿರುಗೇಟು ನೀಡಿದ್ದಾರೆ.

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಆರಂಭವಾಗಿದ್ದು, ಈ ನಡುವೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಟಿಎಂಸಿ ಸಂಸದ ಸೌಗತ ರಾಯ್ ಸೇರಿದಂತೆ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಮೈತ್ರಿಕೂಟದ ನಾಯಕರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಕೈಯಲ್ಲಿ ಕಿರು ಸಂವಿಧಾನದ ಪುಸ್ತಕದ ಪ್ರತಿಗಳನ್ನು ಹಿಡಿದುಕೊಂಡು, ಬಿಜೆಪಿಯವರು ಸಂವಿಧಾನಕ್ಕೆ ಅಗೌರವ ತೋರುತ್ತಿದ್ದಾರೆ ಎಂದು ಆರೋಪಿಸಿದ ಇಂಡಿಯಾ ಮೈತ್ರಿಕೂಟದ ನಾಯಕರು, ಸಂವಿಧಾನ ರಕ್ಷಿಸುವಂತೆ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮೋದಿಯವರು ಸಂವಿಧಾನವನ್ನು ಹಾಳು ಮಾಡಲು ಯತ್ನಿಸಿದ್ದಾರೆ, ಅದಕ್ಕಾಗಿಯೇ ಇಂದು ಎಲ್ಲ ಪಕ್ಷಗಳ ನಾಯಕರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಲ್ಲಿ ಗಾಂಧಿ ಪ್ರತಿಮೆ ಇತ್ತು, ಎಲ್ಲ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಇಂದು ಮೋದಿ ಜೀ, ನೀವು ಸಂವಿಧಾನದ ಪ್ರಕಾರ ಮುಂದುವರಿಯಬೇಕು ಎಂದು ನಾವು ತಿಳಿಸಲು ಬಯಸುತ್ತೇವೆ” ಎಂದು ಹೇಳಿದರು.

“ಅವರು ತುರ್ತು ಪರಿಸ್ಥಿತಿಯ ಬಗ್ಗೆ 100 ಬಾರಿ ಹೇಳುತ್ತಾರೆ. ಆದರೆ ತುರ್ತು ಪರಿಸ್ಥಿತಿ ಘೋಷಿಸದೆ ನೀವು 10 ವರ್ಷಗಳಿಂದ ತುರ್ತು ಪರಿಸ್ಥಿತಿಯನ್ನು ನಿರ್ಮಿಸಿದ್ದೀರಿ. ತರ್ತು ಪರಿಸ್ಥಿತಿ ಬಗ್ಗೆ ಮಾತನಾಡುತ್ತಾ ಎಷ್ಟು ದಿನ ಆಡಳಿತ ನಡೆಸುತ್ತೀರಿ?” ಎಂದು ಖರ್ಗೆ ಕಟುವಾಗಿ ಪ್ರಶ್ನಿಸಿದ್ದಾರೆ.

“ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಹೊಸ ಸಂಸತ್ ಭವನದ ಹೊರಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ, ತುರ್ತು ಪರಿಸ್ಥಿತಿಯ ಬಗ್ಗೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಜೂನ್ 25, 1975 ರಂದು ದೇಶದಲ್ಲಿ ಜಾರಿಗೆ ಬಂದ 21 ತಿಂಗಳ ತುರ್ತು ಪರಿಸ್ಥಿತಿಯನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ, ದೇಶವನ್ನು ಜೈಲಿನಂತೆ ಪರಿವರ್ತಿಸಿದ ಸಮಯವನ್ನು ಭಾರತದ ಹೊಸ ಪೀಳಿಗೆ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದರು.

 

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!