Wednesday, September 11, 2024

ಕೆನರಾ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ : ಇಲ್ಲಿದೆ ಸಂಪೂರ್ಣ ಮಾಹಿತಿ

ಜನಪ್ರತಿನಿಧಿ (ಬೆಂಗಳೂರು) : ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ಅಕೌಂಟ್ಸ್ ಹಾಗೂ ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳ ನೇಮಕಾತಿ ನಡೆಸುತ್ತಿದ್ದು. ಆಯ್ಕೆಯಾದ ಅಭ್ಯರ್ಥಿಗಳು ಕೆನರಾ ಬ್ಯಾಂಕಿನ ಲೆಕ್ಕಪತ್ರ ಮತ್ತು ಆಡಳಿತ ಪ್ರಕ್ರಿಯೆಯನ್ನು ನೋಡಿಕೊಳ್ಳುವುದಕ್ಕೆ ನಿಯೋಜನೆಗೊಳ್ಳುತ್ತಾರೆ.

ವಯೋಮಿತಿ:  ಕನಿಷ್ಠ 28 ವರ್ಷ, SC/ST ಅಭ್ಯರ್ಥಿಗಳಿಗೆ 25 ವರ್ಷ ವಯೋಮಿತಿಯನ್ನು ನಿಗದಿಗೊಳಿಸಲಾಗಿದ್ದು, ಇತರೆ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವವರು B.Com ಪದವಿ ಪಡೆದಿರಬೇಕು. ಕಂಪ್ಯೂಟರ್ ಹಾಗೂ ಅಕೌಂಟಿಂಗ್ ಸಾಫ್ಟ್‌ವೇರ್ ಜ್ಞಾನದ ಒಳಗೊಂಡು ಖಾತೆಗಳು ಹಾಗೂ ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ವೇತನ:  ಮಾಸಿಕ 30,000 ರೂ. ವೇತನ ನೀಡಲಾಗುತ್ತದೆ. ಹೆಚ್ಚುವರಿಯಾಗಿ ಸವಲತ್ತುಗಳು ಮತ್ತು ಇತರ ಪ್ರಯೋಜನಗಳು ದೊರೆಯಲಿವೆ.

ಅರ್ಜಿ ಸಲ್ಲಿಕೆ ಹೇಗೆ ?
1) ಕೆನರಾ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://canarabank.com/pages/Recruitment ಭೇಟಿ ನೀಡಿ ಮತ್ತು ನೇಮಕಾತಿ ವಿಭಾಗದಡಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ.
2) ತಮ್ಮ ಸರಿಯಾದ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
3) ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಅನುಭವದ ಪುರಾವೆ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ.
4) SC/ST ಅಭ್ಯರ್ಥಿಗಳಿಗೆ 300 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
5) ʼCANBANK VENTURE CAPITAL FUND LIMITEDʼ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ ತೆಗೆದುಕೊಳ್ಳಿರಿ.
6) ಭರ್ತಿ ಮಾಡಿದ ಫಾರ್ಮ್ ಮತ್ತು ದಾಖಲೆಗಳನ್ನು CANBANK VENTURE CAPITAL FUND LIMITED (CVCFL) ಬೆಂಗಳೂರು – 560004 ಈ ವಿಳಾಸಕ್ಕೆ ಕಳುಹಿಸಬೇಕು.

ಆಯ್ಕೆಯಾದವರು 12 ತಿಂಗಳ ಕಾಲ ಪ್ರೊಬೇಷನರಿ ಅವಧಿಯನ್ನು ಪೂರ್ಣಗೊಳಿಸಬೇಕಾಗುತ್ತದೆ.

ಜೂನ್ 30ರೊಳಗೆ ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕ. ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದನ್ವಯ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಬಳಿಕ  ನೇರ ಸಂದರ್ಶನದ ಮೂಲಕ ಅಂತಿಮ ಸುತ್ತಿನ ಆಯ್ಕೆ ಮಾಡಲಾಗುತ್ತದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!