spot_img
Wednesday, April 1, 2026
spot_img

ಜೂನ್ 27ರಂದು ಕೆಂಪೇಗೌಡ ಜಯಂತಿ ಆಚರಣೆ | ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ

ಜನಪ್ರತಿನಿಧಿ (ಕುಂದಾಪುರ) : ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿಯನ್ನು ವಿಶೇಷವಾಗಿ ಆಚರಿಸುವುದಕ್ಕೆ ರಾಜ್ಯ ಸರ್ಕಾರದ ಆದೇಶ ಇರುವ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಬಗ್ಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಕುಂದಾಪುರ ತಹಶೀಲ್ದಾರ್‌ ಶೋಭಾಲಕ್ಷ್ಮೀ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಹಕಾರದೊಂದಿಗೆ ನಾಳೆ(25/06/2024) ತಾಲೂಕಿನ ವ್ಯಾಪ್ತಿಗೆ ಒಳಪಡುವ ಎಲ್ಲಾ ಶಾಲೆಗಳಲ್ಲಿ ಕೆಂಪೇಗೌಡರ ಬಗ್ಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ. ಶಾಲಾ ಮಟ್ಟದಲ್ಲಿ ವಿಜೇತರಾದವರು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುತ್ತಾರೆ. ತಾಲೂಕು ಮಟ್ಟದ ಸ್ಪರ್ಧೆಯನ್ನು ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ(26/06/2024)ದಂದು ಏರ್ಪಡಿಸಲಾಗಿದೆ. ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ 27/06/2024 ರಂದು ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕೆಂಪೇಗೌಡರ ಜಯಂತಿ ಆಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು ಎಂದು ಅವರು ವಿವರಿಸಿದರು.

ಗುರುವಾರ (27/06/2024) ರಂದು ನಡೆಯುವ ಕೆಂಪೇಗೌಡ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವರದರಾಜ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಶರಾವತಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ತಾಲೂಕಿನ ಶಾಸಕರಾದ ಕಿರಣ್‌ ಕುಮಾರ್‌ ಕೊಡ್ಗಿ, ಬೈಂದೂರಿನ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ, ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಒಳಗೊಂಡು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!