Saturday, October 12, 2024

ಕನ್ನಡದ ಬಾವುಟ ಬಣ್ಣದ ಹೆಗಲುವಲ್ಲಿ ಧರಿಸಿ ಪ್ರಮಾಣ ವಚನ ಸ್ವೀಕರಿಸಿದ ಕೋಟ ಶ್ರೀನಿವಾಸ ಪೂಜಾರಿ

ಜನಪ್ರತಿನಿಧಿ (ಉಡುಪಿ) : ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾಗಿ ಆಯ್ಕೆಗೊಂಡಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು(ಸೋಮವಾರ) ನವದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷ ಭರ್ತೃಹರಿ ಮಹತಾಬ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಶ್ರೀನಿವಾಸ ಪೂಜಾರಿ ಅವರು ದೇವರ ಹೆಸರಿನಲ್ಲಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸಂದರ್ಭದಲ್ಲಿ ಹಳದಿ ಮತ್ತು ಕೆಂಪು ಬಣ್ಣದ (ರಾಜ್ಯದ ಬಾವುಟದ ಬಣ್ಣಗಳು) ಹೆಗಲುವಲ್ಲಿ(ಶಾಲು) ಧರಿಸಿರುವುದು ಎಲ್ಲರ ಗಮನ ಸೆಳೆಯಿತು.

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ಪಂಚಾಯತಿಯಿಂದ ಪಾರ್ಲಿಮೆಂಟಿನವರೆಗೂ ನನ್ನ ಪಯಣದ ಹಾದಿಯಲ್ಲಿ ಜೊತೆಯಾದ ಸರ್ವರಿಗೂ ಹೃದಯಸ್ಪರ್ಶಿ ವಂದನೆಗಳು. ರಾಷ್ಟ್ರೀಯ ಸ್ವಯಂಸೇವಕ ಸಂಘ, ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಿ ಸದಸ್ಯರು, ನನ್ನ ಹಿತೈಷಿಗಳು ಹಾಗೂ ಉಡುಪಿ ಚಿಕ್ಕಮಗಳೂರು ಜಿಲ್ಲೆಯ ಸಮಸ್ತ ಮತದಾರರ ಬಂಧುಗಳಿಗೆ ನನ್ನ ಪ್ರಣಾಮಗಳು. ನಿಮ್ಮ ನಂಬಿಕೆ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುತ್ತೇನೆ. 18ನೇ ಲೋಕಸಭೆಯ ಸಂಸದನಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಸದಾ ಇರಲೆಂದು ಪ್ರಾರ್ಥನೆ ಎಂದು ಅವರು ಬರೆದುಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!