spot_img
Saturday, December 7, 2024
spot_img

ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದ ವಿಶ್ವೇಶ್ವರ ಹೆಗಡೆ ಕಾಗೇರಿ

ಜನಪ್ರತಿನಿಧಿ(ಉತ್ತರ ಕನ್ನಡ) :  ಉತ್ತರ ಕನ್ನಡ ಲೋಕಸಭಾ ಸದಸ್ಯರಾಗಿ ಆಯ್ಕೆಗೊಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು(ಸೋಮವಾರ) ನವದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷ ಭರ್ತೃಹರಿ ಮಹತಾಬ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಅವರು ಪರಮೇಶ್ವರನ ಹೆಸರಲ್ಲಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ಗಮನ ಸೆಳೆದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ವಿರುದ್ಧ ಕಾಗೇರಿಯವರು 7,76,968 ಇವಿಎಂ ಮತ, 3,526 ಪೋಸ್ಟಲ್ ಮತ ಸೇರಿ 7,80,494 ಮತಗಳಿಂದ ಜಯಗಳಿಸಿದ್ದಾರೆ. ನಿಂಬಾಳ್ಕರ್ ಅವರು 4,42,622 ಮತಗಳನ್ನು ಪಡೆದುಕೊಳ್ಳುವ ಮೂಲಕ ಸೋಲನುಭವಿಸಿದರು. ಒಟ್ಟಿನಲ್ಲಿ ಕಾಗೇರಿಯವರು 3,37,872 ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ತನ್ನದಾಗಿಸಿಕೊಂಡಿದ್ದರು. ರಾಜ್ಯದಲ್ಲಿ ಅತೀ ಹೆಚ್ಚು ಮತಗಳಿಂದ ಗೆದ್ದ ಸಂಸದ ಎಂಬ ಕೀರ್ತಿಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಪಾತ್ರರಾಗಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!