spot_img
Wednesday, April 1, 2026
spot_img

ನಕಲಿ ಪರಶುರಾಮ : ಕ್ರಿಶ್ ಆರ್ಟ್ ವರ್ಲ್ಡ್ ನ ಗುತ್ತಿಗೆದಾರ ಕೃಷ್ಣ ನಾಯಕ್ ವಿರುದ್ಧ ವಂಚನೆ ಪ್ರಕರಣ ದಾಖಲು

ಜನಪ್ರತಿನಿಧಿ (ಕಾರ್ಕಳ) : ಕಳೆದ ಒಂದು ವರ್ಷದಿಂದ ವಿವಾದದಲ್ಲಿ ಸುಳಿಯಲ್ಲಿ ಸಿಲುಕಿರುವ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್‌ಗೆ ಒಳಪಡುವ ಉಮಿಕಲ್‌ ಕುಂಜದಲ್ಲಿ ಶಾಸಕ ಸುನೀಲ್‌ ಕುಮಾರ್‌ ನೇತೃತ್ವದಲ್ಲಿ ನಿರ್ಮಾಣ ಮಾಡಲಾಗಿದ್ದ ಪರಶುರಾಮ ಥೀಮ್ ಪಾರ್ಕಿನಲ್ಲಿ ಸ್ಥಾಪಿಸಲಾದ ನಕಲಿ ಪರಶುರಾಮನ ಪ್ರತಿಮೆ ಹಾಗೂ ಅಲ್ಲಿ ನಡೆದಿದೆ ಎನ್ನುವ ಅವ್ಯವಹಾರಗಳ ಬಗ್ಗೆ ತನಿಖೆ ಆಗಬೇಕು ಎಂದು ಪ್ರಕರಣವನ್ನು ಮಾಹಿತಿ ಹಕ್ಕಿನ ಮೂಲಕ ಬಯಲಿಗೆಳೆದ ದಿವ್ಯ ನಾಯಕ್‌ ನೇತೃತ್ವದ ಸಮಾನ ಮನಸ್ಕರ ತಂಡ, ಕಾಂಗ್ರೆಸ್ ಹಾಗೂ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಸದಸ್ಯರು ತೀವ್ರ ಹೋರಾಟ ಹಾಗೂ ಪ್ರತಿಭಟನೆ ನಡೆಸಿದ್ದರು.

ಕೊನೆಗೂ ರಾಜ್ಯ ಕಾಂಗ್ರೆಸ್‌ ಸರ್ಕಾರ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸಿಐಡಿಗೆ ನೀಡಿ ಆದೇಶಿಸಿತ್ತು. ಈ ಬೆಳವಣಿಗೆಯ ನಡುವೆ ಇದೀಗ ಮೂರ್ತಿ ನಿರ್ಮಾಣದ ಗುತ್ತಿಗೆದಾರನ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ಪರಶುರಾಮ ಪ್ರತಿಮೆ ನಿರ್ಮಾಣದ ಹೊಣೆ ವಹಿಸಿಕೊಂಡಿದ್ದ ಬೆಂಗಳೂರಿನ ಕ್ರಿಶ್ ಆರ್ಟ್ ವರ್ಲ್ಡ್ ನ ಗುತ್ತಿಗೆದಾರ ಕೃಷ್ಣ ನಾಯಕ್ ಅವರ ವಿರುದ್ಧ ಪರಶುರಾಮನ ಕಂಚಿನ ಪ್ರತಿಮೆ ನಿರ್ಮಿಸುವುದಾಗಿ ಉಡುಪಿ ನಿರ್ಮಿತಿ ಕೇಂದ್ರದಿಂದ 1,25,50,000 ಕೋಟಿ ರೂ ಹಣ ಪಡೆದು ನಕಲಿ ಪ್ರತಿಮೆ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ ಎಂದು ನಲ್ಲೂರು ಕೃಷ್ಣ ಶೆಟ್ಟಿ ಎನ್ನುವವರು ನೀಡಿರುವ ದೂರಿನಂತೆ ಕಾರ್ಕಳ ನಗರ ಠಾಣೆಯಲ್ಲಿ ಕೃಷ್ಣ ನಾಯಕ್ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ಈಗಾಗಲೇ ಸಿಐಡಿ ಈ ಪ್ರಕೃಣದ ಬಗ್ಗೆ  ತನಿಖೆ ನಡೆಸುತ್ತಿದ್ದು, ಇದೀಗ ಪ್ರತಿಮೆ ನಿರ್ಮಾಣದ ಗುತ್ತಿಗೆದಾರನ ವಿರುದ್ಧ ಕೇಸ್‌ ದಾಖಲಾಗಿದ್ದು, ಈ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಂತಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!