Sunday, September 8, 2024

ಬೈಲೂರು ಶಾಲೆಯಲ್ಲಿ 1ನೇ ತರಗತಿಯಿಂದ ದ್ವಿಭಾಷಾ ಮಾಧ್ಯಮ ತರಗತಿ ಉದ್ಘಾಟನೆ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಕುಂದಾಪುರ ವಲಯ ಇಲ್ಲಿ ಸರಕಾರದ ಅಧಿಕೃತ ಅನುಮತಿಯೊಂದಿಗೆ 1ನೇ ತರಗತಿಯಿಂದ ದ್ವಿಭಾಷಾ ಮಾಧ್ಯಮದ ತರಗತಿಯ ಉದ್ಘಾಟನಾ ಕಾರ್ಯಕ್ರಮ ಜೂ.24ರಂದು ನಡೆಯಿತು.

ದ್ವಿಭಾಷಾ ಮಾಧ್ಯಮದ ತರಗತಿ ಉದ್ಘಾಟಿಸಿ ಮಾತನಾಡಿದ ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರು, ರೆಡ್‌ಕ್ರಾಸ್ ಕುಂದಾಪುರ ಘಟಕದ ಸಭಾಪತಿಗಳಾದ ಜಯಕರ ಶೆಟ್ಟಿ ಮೂಡುಬೈಲೂರು, ಇಂಗ್ಲಿಷ್ ಇಂದಿನ ಅನಿವಾರ್ಯತೆ, ಸರಕಾರಿ ಶಾಲೆಯಲ್ಲೂ ಆಂಗ್ಲ ಮಾಧ್ಯಮದಲ್ಲಿ ಕಲಿಯಲು ಅವಕಾಶ ದೊರೆತಿರುವುದು ಉತ್ತಮ ಬೆಳವಣಿಗೆ” ಎಂದು ಅಭಿಪ್ರಾಯಪಟ್ಟರು.

ಶಾಲಾ ಎಸ್‌ಡಿ ಎಮ್‌ಸಿ ಅಧ್ಯಕ್ಷೆ ಶೋಭಾ ಅಧ್ಯಕ್ಷತೆ ವಹಿಸಿದ್ದರು. ಜಯಕರ ಶೆಟ್ಟಿಯವರು ಕೊಡಮಾಡಿದ ಉಚಿತ ನೋಟ್‌ಪುಸ್ತಕ ಮತ್ತು ಎಲ್‌ಕೆ ಜಿ ಮತ್ತು ಯು ಕೆ ಜಿ ತರಗತಿಗಳ ಕಲಿಕಾ ಪರಿಕರ ವಿತರಣೆಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಆಶಾಶಿವರಾಮ ಶೆಟ್ಟಿ ಮೂಡುಬೈಲೂರು, ಶಾಲಾ ಮಾಜಿ ಎಸ್ ಡಿ ಎಮ್‌ಸಿ ಅಧ್ಯಕ್ಷ ಸುಬ್ರಹ್ಮಣ್ಯ ಐತಾಳರು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಶಂಕರನಾರಾಯಣ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮೇಶ ಶೆಟ್ಟಿ ಕಲ್ಗದ್ದೆ ಉಪಸ್ಥಿತರಿದ್ದು ಶಾಲೆ ಸಮುದಾಯದೊಂದದಿಗೆ ಉತ್ತಮ ಸಂಬಂಧವನ್ನು ಹೊಂದಿದಾಗ ಅಭಿವೃದ್ಧಿ ಸಾಧ್ಯವೆಂದು ಅಭಿಪ್ರಾಯಪಟ್ಟರು.

ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಡಿ. ಸ್ವಾಗತಿಸಿದರು. ಸಹಶಿಕ್ಷಕ ಆನಂದ ಕುಲಾಲ ಪ್ರಸ್ತಾವನೆಗೈದರು. ಗೌರವ ಶಿಕ್ಷಕಿಯರಾದ ವೈಶಾಲಿ ಶೆಟ್ಟಿ, ನಯನ ಸಹಕರಿಸಿದರು. ಸಹಶಿಕ್ಷಕಿ ಸಂಧ್ಯಾ ಕೆ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ಪ್ರಮೀಳಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!