spot_img
Wednesday, January 22, 2025
spot_img

ಸಂವಿಧಾನದ ಕಿರು ಪುಸ್ತಕ ಹಿಡಿದುಕೊಂಡೇ ರಾಹುಲ್‌ ಗಾಂಧಿ ಪ್ರಮಾಣ ವಚನ ಸ್ವೀಕಾರ

ಜನಪ್ರತಿನಿಧಿ(ನವ ದೆಹಲಿ) : ರಾಯ್‌ಬರೇಲಿಯ ಲೋಕಸಭಾ ಸದಸ್ಯರಾಗಿ ಆಯ್ಕೆಗೊಂಡಿರುವ ರಾಹುಲ್‌ ಗಾಂಧಿ ಅವರು ಇಂದು(ಮಂಗಳವಾರ) ನವದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಹುಲ್‌ ಗಾಂಧಿ ಅವರಿಗೆ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷ ಭರ್ತೃಹರಿ ಮಹತಾಬ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಕೈಯಲ್ಲಿ ಸಂವಿಧಾನದ ಕಿರು ಪ್ರತಿಯನ್ನು ಹಿಡಿದುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ  ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು.

ರಾಹುಲ್‌ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಪಕ್ಷದ ನಾಯಕರು “ಭಾರತ್ ಜೋಡೋ” ಘೋಷಣೆಗಳನ್ನು ಕೂಗಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ, ರಾಹುಲ್ “ಜೈ ಹಿಂದ್”, “ಜೈ ಸಂವಿಧಾನ್” ಎಂದು ಹೇಳಿದರು.

https://x.com/RahulGandhi/status/1805562696991130094?t=2nksCBnNP7TQnsiHDFjYpw&s=08

ಲೋಕಸಭೆ ಚುನಾವಣೆಯ ನಂತರ ಸಂಸತ್ತು ಮೊದಲ ಬಾರಿಗೆ ಸಭೆ ಸೇರುತ್ತಿದ್ದಂತೆ, ಇಂಡಿಯಾ ಮೈತ್ರಿಕೂಟದ ವಿರೋಧ ಪಕ್ಷದ ಸಂಸದರು ಸಂಸತ್ತಿನ ಸಂಕೀರ್ಣದ ಒಳಗೆ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡಿರುವುದು ಕಂಡು ಬಂದಿತ್ತು.

ಇನ್ನು, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಯನಾಡು ಹಾಗೂ ರಾಯ್‌ಬರೇಲಿ ಎರಡು ಕ್ಷೇತ್ರದಲ್ಲಿ ಕಣಕ್ಕಿಳಿದು ಅದೃಷ್ಟ ಪರೀಕ್ಷೆ ನಡೆಸಿ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ರಾಜಕೀಯ ಮರಜನ್ಮ ಕೊಟ್ಟ ಕೇರಳದ ವಯನಾಡುಹಾಗೂ ಗಾಂಧಿ ಕುಟುಂಬದ ಭದ್ರಕೋಟೆ ರಾಯ್‌ ಬರೇಲಿ ಕ್ಷೇತ್ರಗಳಲ್ಲಿ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಪ್ರಚಂಡ ಗೆಲುವು ಪಡೆದಿದ್ದರು. ಎರಡೂ ಕ್ಷೇತ್ರಗಳನ್ನು ಗೆದ್ದಿರುವ ರಾಹುಲ್‌ ಎರಡೂ ಕ್ಷೇತ್ರವನ್ನೂ ಪ್ರತಿನಿಧಿಸುವಂತಿಲ್ಲ. ಹಾಗಾಗಿ ರಾಯ್‌ಬರೇಲಿಯನ್ನು ಉಳಿಸಿಕೊಂಡು, ಕೇರಳದ ವಯನಾಡು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಅವರಿಗೆ ಉಪ ಚುನಾವಣೆಯ ಕಣಕ್ಕಿಳಿಯುವಂತೆ ಅವಕಾಶ ಮಾಡಿಕೊಟ್ಟಿದ್ದಾರೆ.

ರಾಯ್‌ಬರೇಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಕಾಂಗ್ರೆಸ್‌ ಹಿರಿಯ ನಾಯಕ ರಾಹುಲ್‌ ಗಾಂಧಿ ಅವರು ವಯನಾಡ್‌ ಜನತೆಗೆ ಭಾವನಾತ್ಮಕ ಪತ್ರ ಬರೆದಿದ್ದು, ನಿರಂತರವಾಗಿ ನಿಂದನೆಗಳನ್ನು ಎದುರಿಸಿದಾಗ ನಿಮ್ಮ ಬೇಷರತ್ ಪ್ರೀತಿ ನನ್ನನ್ನು ರಕ್ಷಿಸಿದೆ ಎಂದು ಹೇಳಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!