Wednesday, September 11, 2024

18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ | ಧ್ವನಿ ಮತದ ಮೂಲಕ ಅಂಗೀಕಾರ

ಜನಪ್ರತಿನಿಧಿ (ನವದೆಹಲಿ) : ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ 18ನೇ ಲೋಕಸಭೆಯ ಸ್ಪೀಕರ್ ಆಗಿ ಇಂದು(ಬುಧವಾರ) ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರ ವಿರುದ್ಧ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ಆಡಳಿತಾರೂಢ ಎನ್‌ಡಿಎ ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆದಿತ್ತು.

ಓಂ ಬಿರ್ಲಾ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಹಂಗಾಮಿ ಸ್ಪೀಕರ್ ಅವರು ಧ್ವನಿ ಮತದ ಮೂಲಕ ಸಂಸದರ ಮತಗಳನ್ನು ಅಂಗೀಕರಿಸಿದರು.

ಓಂ ಬಿರ್ಲಾ ಎನ್ ಡಿಎ ಮೈತ್ರಿ ಸರ್ಕಾರದಲ್ಲಿ ಎರಡನೇ ಬಾರಿಗೆ ಲೋಕಸಭಾಧ್ಯಕ್ಷರಾಗುತ್ತಿದ್ದು, ಅವರನ್ನು ಸ್ಪೀಕರ್ ಕುರ್ಚಿ ಬಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕರೆದುಕೊಂಡು ಬಂದು ಗೌರವಿಸಿದರು. ಎರಡನೇ ಅವಧಿಗೆ ನೀವು ಲೋಕಸಭಾಧ್ಯಕ್ಷರಾಗಿ ಆಯ್ಕೆಯಾಗುತ್ತಿರುವುದು ಸದನಕ್ಕೆ ಗೌರವವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

17ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಅವರ ಐದು ವರ್ಷಗಳ ಅನುಭವವು ಸದನವನ್ನು ಸರಿಯಾದ ದಿಕ್ಕಿನಲ್ಲಿ ನಡೆಸಲು ಮತ್ತು ಅದನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ಪ್ರಧಾನಿ ವ್ಯಕ್ತಪಡಿಸಿದರು.

ಕೋಚಿಂಗ್ ಫ್ಟಾಕ್ಟರಿಗೆ ಹೆಸರುವಾಸಿಯಾಗಿರುವ ರಾಜಸ್ಥಾನದ ಕೋಟಾ ಕ್ಷೇತ್ರದಿಂದ ಸಂಸದರಾಗಿರುವ 61 ವರ್ಷದ ಓಂ ಬಿರ್ಲಾ ಅವರು ಮೂರನೇ ತಲೆಮಾರಿನ ಆರ್‌ಎಸ್‌ಎಸ್ ಕುಟುಂಬದಿಂದ ಬಂದವರು. ಅದಕ್ಕೂ ಮುನ್ನ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ಶಾಸಕರಾಗಿದ್ದರು.

ಇನ್ನು, ಲೋಕಸಭೆಯಲ್ಲಿ ಕಲಾಪ ನಡೆಯುತ್ತಿದ್ದಾಗ ಸಾರ್ವಜನಿಕ ಗ್ಯಾಲರಿಯಲ್ಲಿದ್ದ ಇಬ್ಬರು ಯುವಕರು ಸದನಕ್ಕೆ ಹಾರಿ, ಸ್ಟೋಕ್ ಕ್ಯಾನ್ ಅನ್ನು ಸಿಡಿಸಿದ್ದರು. ಭದ್ರತಾ ಲೋಪದ ಕುರಿತು ಗೃಹಮಂತ್ರಿ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದವು. ಈ ಕಾರಣಕ್ಕೆ ವಿಪಕ್ಷಗಳ 100ಕ್ಕೂ ಅಧಿಕ ಸಂಸದರನ್ನು ಓಂ ಬಿರ್ಲಾ ಅಮಾನತು ಮಾಡಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!